ಬಳ್ಳಾರಿ :ಮಹರ್ಷಿ ವಾಲ್ಮೀಕಿ ವೃತ್ತ ನಾಮಕರಣ ಐತಿಹಾಸಿಕ ನಿರ್ಧಾರ : ಶಾಸಕ ನಾರಾ ಭರತರೆಡ್ಡಿ
ಬಳ್ಳಾರಿ, 24 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಕರ್ನಾಟಕ ರಾಜ್ಯ ಸರ್ಕಾರ ಬಳ್ಳಾರಿಯ ಎಸ್ಪಿ ವೃತ್ತಕ್ಕೆ ಅಧಿಕೃತವಾಗಿ `ಮಹರ್ಷಿ ವಾಲ್ಮೀಕಿ ಸರ್ಕಲ್'' ಎಂದು ನಾಮಕರಣ ಮಾಡಿ ಆದೇಶವನ್ನು ಪ್ರಕಟಿಸಿದೆ. ಬಳ್ಳಾರಿ ನಗರ ಶಾಸಕ ನಾರಾ ಭರತರೆಡ್ಡಿ ಅವರು, ಈ ಮಾಹಿತಿ ನೀಡಿದ್ದು, ಕರ್ನಾಟಕ ಸರ್ಕಾರವು ಎಸ್ಪಿ
ಬಳ್ಳಾರಿ :`ಮಹರ್ಷಿ ವಾಲ್ಮೀಕಿ ಸರ್ಕಲ್' - ಐತಿಹಾಸಿಕ : ಶಾಸಕ ನಾರಾ ಭರತರೆಡ್ಡಿ


ಬಳ್ಳಾರಿ, 24 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಕರ್ನಾಟಕ ರಾಜ್ಯ ಸರ್ಕಾರ ಬಳ್ಳಾರಿಯ ಎಸ್ಪಿ ವೃತ್ತಕ್ಕೆ ಅಧಿಕೃತವಾಗಿ `ಮಹರ್ಷಿ ವಾಲ್ಮೀಕಿ ಸರ್ಕಲ್' ಎಂದು ನಾಮಕರಣ ಮಾಡಿ ಆದೇಶವನ್ನು ಪ್ರಕಟಿಸಿದೆ.

ಬಳ್ಳಾರಿ ನಗರ ಶಾಸಕ ನಾರಾ ಭರತರೆಡ್ಡಿ ಅವರು, ಈ ಮಾಹಿತಿ ನೀಡಿದ್ದು, ಕರ್ನಾಟಕ ಸರ್ಕಾರವು ಎಸ್ಪಿ ಸರ್ಕಲ್ನಲ್ಲಿ ಇರುವ ಮಹರ್ಷಿ ವಾಲ್ಮೀಕಿ ಪುತ್ಥಳಿಯ ವೃತ್ತಕ್ಕೆ `ಮಹರ್ಷಿ ವಾಲ್ಮೀಕಿ ಸರ್ಕಲ್' ಎಂದು ನಾಮಕರಣ ಮಾಡಿ ಆದೇಶ ಜಾರಿ ಮಾಡಿರುವುದು ಐತಿಹಾಸಿಕ ನಿರ್ಧಾರವಾಗಿದ್ದು, ಈ ಸಮಯವನ್ನು `ಐತಿಹಾಸಿಕ ಕ್ಷಣ' ಎಂದು ಅವರು ಸಂತೋಷ ವ್ಯಕ್ತಪಡಿಸಿದರು.

ಮಹರ್ಷಿ ವಾಲ್ಮೀಕಿ ವೃತ್ತಕ್ಕೆ ಶೀಘ್ರದಲ್ಲೇ ನಾಮಕರಣ ಮಾಡಿ, ಮಹರ್ಷಿ ವಾಲ್ಮಿಕಿ ಅವರ ಪುತ್ಥಳಿಯನ್ನು ಅನಾವರಣ ಮಾಡಲಾಗುತ್ತದೆ. ಈ ಮೂಲಕ ಸರ್ಕಾರ ಸಮಾಜದಲ್ಲಿ ಸೌಹಾರ್ದಯುತ ಜೀವನಕ್ಕೆ ಪ್ರತಿಯೊಬ್ಬರಿಗೂ ಅವಕಾಶ ನೀಡುತ್ತಿದೆ ಎನ್ನುವುದನ್ನು ಪ್ರತಿಯೊಬ್ಬರಿಗೂ ಅರ್ಥ ಮಾಡಿಸಲಾಗುತ್ತದೆ ಎಂದು ಅವರು ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande