ಮೈಸೂರು ದಸರಾ ಪುಸ್ತಕ ಮೇಳ: ಪುಸ್ತಕಗಳ ಬಿಡುಗಡೆಗೆ ಅರ್ಜಿ ಆಹ್ವಾನ
ಬಳ್ಳಾರಿ, 24 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗುತ್ತಿರುವ ‘ದಸರಾ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ–2026’ರಲ್ಲಿ ಹೊಸ ಪುಸ್ತಕಗಳನ್ನು ಬಿಡುಗಡೆ ಮಾಡಲು ಆಸಕ್ತ ಲೇಖಕರು ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಮೈಸೂರು ನಗರ
ಮೈಸೂರು ದಸರಾ ಪುಸ್ತಕ ಮೇಳ: ಪುಸ್ತಕಗಳ ಬಿಡುಗಡೆಗೆ ಅರ್ಜಿ ಆಹ್ವಾನ


ಬಳ್ಳಾರಿ, 24 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಆಯೋಜಿಸಲಾಗುತ್ತಿರುವ ‘ದಸರಾ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ–2026’ರಲ್ಲಿ ಹೊಸ ಪುಸ್ತಕಗಳನ್ನು ಬಿಡುಗಡೆ ಮಾಡಲು ಆಸಕ್ತ ಲೇಖಕರು ಹಾಗೂ ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಮೈಸೂರು ನಗರದ ಹಳೆಯ ಜಿಲ್ಲಾಧಿಕಾರಿ ಕಚೇರಿ ಎದುರಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಅಕ್ಟೋಬರ್ 11 ರಿಂದ 20ರವರೆಗೆ ಪುಸ್ತಕ ಮೇಳ ನಡೆಯಲಿದೆ. ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ವಿಚಾರ ಸಂಕಿರಣಗಳ ಜೊತೆಗೆ, 2026ರಲ್ಲಿ ಪ್ರಕಟವಾದ ನೂತನ ಕೃತಿಗಳನ್ನು ನಾಡಿನ ಖ್ಯಾತ ಸಾಹಿತಿಗಳ ಸಮ್ಮುಖದಲ್ಲಿ ಬಿಡುಗಡೆ ಮಾಡಲು ಕನ್ನಡ ಪುಸ್ತಕ ಪ್ರಾಧಿಕಾರ ನಿರ್ಧರಿಸಿದೆ.

*ಅರ್ಜಿ ಸಲ್ಲಿಕೆ ಮತ್ತು ನಿಯಮಗಳು:*

ಆಸಕ್ತರು ಪ್ರಾಧಿಕಾರದ ಅಧಿಕೃತ ವೆಬ್ಸೈಟ್ (https://kpp.karnataka.gov.in) ಮೂಲಕ ನಿಗದಿತ ಅರ್ಜಿ ನಮೂನೆಯನ್ನು ಉಚಿತವಾಗಿ ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಯೊಂದಿಗೆ ಬಿಡುಗಡೆ ಮಾಡಲಿರುವ ಪುಸ್ತಕದ 3 ಪ್ರತಿಗಳನ್ನು ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಅಕ್ಟೋಬರ್ 05, 2026 ಕೊನೆಯ ದಿನಾಂಕವಾಗಿದ್ದು, ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಪುಸ್ತಕಗಳು ಯಾವುದೇ ವಿವಾದಾತ್ಮಕ ಅಂಶಗಳನ್ನು ಹೊಂದಿರಬಾರದು. ಕಾನೂನು ತೊಡಕುಗಳು ಎದುರಾದಲ್ಲಿ ಲೇಖಕರು ಅಥವಾ ಪ್ರಕಾಶಕರೇ ನೇರ ಹೊಣೆಗಾರರಾಗಿರುತ್ತಾರೆ. ಪುಸ್ತಕಗಳ ಆಯ್ಕೆ ಮತ್ತು ತಿರಸ್ಕರಿಸುವ ಅಂತಿಮ ಹಕ್ಕು ಪ್ರಾಧಿಕಾರಕ್ಕಿರುತ್ತದೆ. ಕಾರ್ಯಕ್ರಮಕ್ಕೆ ಆಗಮಿಸುವವರಿಗೆ ಯಾವುದೇ ಪ್ರಯಾಣ ಭತ್ಯೆ ಅಥವಾ ಸಂಭಾವನೆ ಇರುವುದಿಲ್ಲ.

ಸ್ವೀಕೃತವಾಗುವ ಪುಸ್ತಕಗಳ ಸಂಖ್ಯೆಗೆ ಅನುಗುಣವಾಗಿ, ಮೇಳ ನಡೆಯುವ ಒಂಬತ್ತು ದಿನಗಳಲ್ಲಿ ಬಿಡುಗಡೆಯ ದಿನಾಂಕವನ್ನು ನಿಗದಿಪಡಿಸಿ ಸಂಬ0ಧಪಟ್ಟವರಿಗೆ ಮುಂಚಿತವಾಗಿ ಮಾಹಿತಿ ನೀಡಲಾಗುವುದು.

ಹೆಚ್ಚಿನ ವಿವರಗಳಿಗಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರನ್ನು (ಮೊ: 9448056562) ಸಂಪರ್ಕಿಸಬಹುದು ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande