ಸಿಂದಗಿ ಕೆರೆಯ ಸೌಂದರ್ಯ ಹೆಚ್ಚಿಸಲು ನಿರಂತರ ಪ್ರಯತ್ನ: ಶಾಸಕ ಅಶೋಕ್ ಮನಗೂಳಿ
ವಿಜಯಪುರ, 24 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ನಗರದ ಜೀವನಾಡಿಯಾಗಿರುವ ಐತಿಹಾಸಿಕ ಸಿಂದಗಿ ಕೆರೆಯ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸುವುದರ ಜೊತೆಗೆ ಸಾರ್ವಜನಿಕರಿಗೆ ಅಗತ್ಯವಿರುವ ವಿವಿಧ ಮೂಲಸೌಕರ್ಯಗಳನ್ನು ಕಲ್ಪಿಸುವ ಕಾರ್ಯವನ್ನು ನಿರಂತರವಾಗಿ ಕೈಗೊಳ್ಳಲಾಗುತ್ತಿದೆ ಎಂದ
ಕೆರೆ


ವಿಜಯಪುರ, 24 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ವಿಜಯಪುರ ಜಿಲ್ಲೆಯ ಸಿಂದಗಿ ನಗರದ ಜೀವನಾಡಿಯಾಗಿರುವ ಐತಿಹಾಸಿಕ ಸಿಂದಗಿ ಕೆರೆಯ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸುವುದರ ಜೊತೆಗೆ ಸಾರ್ವಜನಿಕರಿಗೆ ಅಗತ್ಯವಿರುವ ವಿವಿಧ ಮೂಲಸೌಕರ್ಯಗಳನ್ನು ಕಲ್ಪಿಸುವ ಕಾರ್ಯವನ್ನು ನಿರಂತರವಾಗಿ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಅಶೋಕ್ ಮನಗೂಳಿ ತಿಳಿಸಿದ್ದಾರೆ.

ಸಿಂದಗಿ ನಗರದ ಪ್ರಮುಖ ಜಲಮೂಲ ಹಾಗೂ ಜನರೊಂದಿಗೆ ಭಾವನಾತ್ಮಕ ನಂಟು ಹೊಂದಿರುವ ಸಿಂದಗಿ ಕೆರೆಯ ಅಭಿವೃದ್ಧಿ ಮತ್ತು ಸೌಂದರ್ಯೀಕರಣಕ್ಕೆ ಆದ್ಯತೆ ನೀಡಲಾಗುತ್ತಿದೆ. ಕೆರೆಯ ಸುತ್ತಮುತ್ತಲಿನ ಪ್ರದೇಶವನ್ನು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಅಭಿವೃದ್ಧಿಪಡಿಸುವುದು, ಪ್ರವಾಸಿಗರು ಹಾಗೂ ಸ್ಥಳೀಯರು ನೆಮ್ಮದಿಯಿಂದ ಕಾಲ ಕಳೆಯಲು ಅಗತ್ಯ ವಾತಾವರಣ ನಿರ್ಮಿಸುವುದು ಸೇರಿದಂತೆ ಹಲವು ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡಲಾಗುತ್ತಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಶೇಷವಾಗಿ ಸೂರ್ಯಾಸ್ತದ ಸಂದರ್ಭದಲ್ಲಿ ಕೆರೆಯ ಸುತ್ತಲಿನ ವಾತಾವರಣ ಮತ್ತಷ್ಟು ಮನಮೋಹಕವಾಗಿ ಕಂಡುಬಂದಿತು. ಆಕಾಶದಲ್ಲಿ ಮೂಡಿದ ರಂಗುರಂಗಿನ ಛಾಯೆಗಳು ಕೆರೆಯ ನೀರಿನಲ್ಲಿ ಪ್ರತಿಬಿಂಬಗೊಂಡು, ಪ್ರಕೃತಿಯ ಮಡಿಲಿನಲ್ಲಿ ಸಿಂದಗಿ ಕೆರೆ ಮತ್ತಷ್ಟು ಆಕರ್ಷಕವಾಗಿ ಕಂಗೊಳಿಸಿತು. ಕೆರೆಯ ನೈಜ ಸೌಂದರ್ಯ ಹಾಗೂ ಸೂರ್ಯಾಸ್ತದ ದೃಶ್ಯವನ್ನು ಕಣ್ತುಂಬಿಕೊಂಡ ಶಾಸಕ ಅಶೋಕ್ ಮನಗೂಳಿ, ಸಿಂದಗಿ ಕೆರೆಯ ಅಭಿವೃದ್ಧಿಯ ಮೂಲಕ ನಗರದ ಸೌಂದರ್ಯಕ್ಕೂ ಹೊಸ ಮೆರುಗು ದೊರೆಯುತ್ತಿದೆ ಎಂದು ಹೇಳಿದ್ದಾರೆ.

ನಗರದ ಜನರಿಗೆ ಉತ್ತಮ ಸಾರ್ವಜನಿಕ ಸ್ಥಳಗಳು ಹಾಗೂ ಮೂಲಸೌಕರ್ಯ ಒದಗಿಸುವುದು ಅಭಿವೃದ್ಧಿಯ ಪ್ರಮುಖ ಭಾಗವಾಗಿದೆ. ಈ ನಿಟ್ಟಿನಲ್ಲಿ ಸಿಂದಗಿ ಕೆರೆಯ ಅಭಿವೃದ್ಧಿ ಕಾರ್ಯಗಳನ್ನು ಹಂತ ಹಂತವಾಗಿ ಮುಂದುವರಿಸಲಾಗುತ್ತಿದೆ. ಕೆರೆಯ ಸೌಂದರ್ಯೀಕರಣದ ಜೊತೆಗೆ ಸಾರ್ವಜನಿಕರ ಅನುಕೂಲ, ಪರಿಸರ ಸಂರಕ್ಷಣೆ ಹಾಗೂ ನಗರದ ಆಕರ್ಷಣೆಯನ್ನು ಹೆಚ್ಚಿಸುವ ಉದ್ದೇಶದಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಐತಿಹಾಸಿಕ ಹಿನ್ನೆಲೆ ಹೊಂದಿರುವ ಸಿಂದಗಿ ಕೆರೆಯನ್ನು ನಗರದ ಪ್ರಮುಖ ಆಕರ್ಷಣೆಯನ್ನಾಗಿ ರೂಪಿಸುವ ಮೂಲಕ ಸ್ಥಳೀಯರಿಗೆ ಉತ್ತಮ ಪರಿಸರ ಹಾಗೂ ಸಾರ್ವಜನಿಕರಿಗೆ ಮನರಂಜನೆ ಮತ್ತು ವಿಶ್ರಾಂತಿಗೆ ಸೂಕ್ತ ತಾಣ ಕಲ್ಪಿಸುವ ಆಶಯ ಹೊಂದಲಾಗಿದೆ. ಅಭಿವೃದ್ಧಿ ಕಾರ್ಯಗಳು ಪೂರ್ಣಗೊಂಡಂತೆ ಸಿಂದಗಿ ಕೆರೆಯ ಸೌಂದರ್ಯ ಮತ್ತಷ್ಟು ಹೆಚ್ಚಲಿದ್ದು, ನಗರದ ಒಟ್ಟಾರೆ ಚಿತ್ರಣಕ್ಕೂ ಹೊಸ ರೂಪ ದೊರೆಯಲಿದೆ ಎಂದು ಅಶೋಕ್ ಮನಗೂಳಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರೊಂದಿಗೆ ಕೆರೆಯ ಅಭಿವೃದ್ಧಿ ಹಾಗೂ ಸೌಂದರ್ಯೀಕರಣಕ್ಕೆ ಸಂಬಂಧಿಸಿದ ವಿಚಾರಗಳ ಕುರಿತು ಚರ್ಚೆ ಮಾಡಲಾಗಿತ್ತು

ಇದೀಗ ಸಿಂದಗಿ ನಗರದ ಅಭಿವೃದ್ಧಿಗೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಕಲ್ಪಿಸುವ ಕಾರ್ಯಕ್ಕೆ ಮುಂದಿನ ದಿನಗಳಲ್ಲಿಯೂ ಆದ್ಯತೆ ನೀಡಲಾಗುವುದು ಎಂದು ಶಾಸಕ ಅಶೋಕ್ ಮನಗೂಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande