ನೊಯ್ಡಾ ಬಸ್ ದುರಂತ:ಪ್ರಧಾನಿ ಸಂತಾಪ, ಪರಿಹಾರ ಘೋಷಣೆ
ನವದೆಹಲಿ, 24 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಉತ್ತರ ಪ್ರದೇಶದ ಗ್ರೇಟರ್ ನೊಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದ ಸ್ಲೀಪರ್ ಬಸ್ ಅಗ್ನಿ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಹಾಗೂ ಗಾಯಾಳುಗಳಿಗೆ ಆರ್ಥಿಕ ನೆರವು ಘೋಷಿಸಿದ್ದಾರೆ.
आग में जलकर क्षतिग्रस्त बस


ನವದೆಹಲಿ, 24 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಉತ್ತರ ಪ್ರದೇಶದ ಗ್ರೇಟರ್ ನೊಯ್ಡಾದ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಸಂಭವಿಸಿದ ಸ್ಲೀಪರ್ ಬಸ್ ಅಗ್ನಿ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ಹಾಗೂ ಗಾಯಾಳುಗಳಿಗೆ ಆರ್ಥಿಕ ನೆರವು ಘೋಷಿಸಿದ್ದಾರೆ.

ಪ್ರಧಾನಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ ₹2 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ ₹50 ಸಾವಿರ ನೆರವು ನೀಡಲಾಗುವುದು ಎಂದು ಪ್ರಧಾನಿ ಮೋದಿ ಗುರುವಾರ ತಿಳಿಸಿದ್ದಾರೆ.

‘ಎಕ್ಸ್‌’ನಲ್ಲಿ ಘಟನೆ ಕುರಿತು ಸಂತಾಪ ವ್ಯಕ್ತಪಡಿಸಿರುವ ಅವರು, ಗ್ರೇಟರ್ ನೊಯ್ಡಾದಲ್ಲಿ ಬಸ್‌ಗೆ ಬೆಂಕಿ ಹೊತ್ತಿಕೊಂಡು ಜನರು ಮೃತಪಟ್ಟಿರುವ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ತಮ್ಮ ಆತ್ಮೀಯರನ್ನು ಕಳೆದುಕೊಂಡ ಕುಟುಂಬಗಳೊಂದಿಗೆ ಸಂತಾಪವಿದೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುವುದಾಗಿ ತಿಳಿಸಿದ್ದಾರೆ.

ದೆಹಲಿ ಕಾಶ್ಮೀರಿ ಗೇಟ್‌ನಿಂದ ಉತ್ತರ ಪ್ರದೇಶದ ಮಹೋಬಾಗೆ ತೆರಳುತ್ತಿದ್ದ ದ್ವಿತಳ ಸ್ಲೀಪರ್ ಬಸ್‌ಗೆ ಬುಧವಾರ ಮಧ್ಯರಾತ್ರಿ ಯಮುನಾ ಎಕ್ಸ್‌ಪ್ರೆಸ್‌ವೇಯ 33ನೇ ಕಿಲೋಮೀಟರ್‌ನಲ್ಲಿ ಬೆಂಕಿ ಹೊತ್ತಿಕೊಂಡಿತ್ತು. ಆ ವೇಳೆ ಬಸ್‌ನಲ್ಲಿ 35 ಮಂದಿ ಪ್ರಯಾಣಿಸುತ್ತಿದ್ದರು. ದುರಂತದಲ್ಲಿ ಮಹಿಳೆ ಸೇರಿದಂತೆ ಒಂಬತ್ತು ಮಂದಿ ಸುಟ್ಟು ಮೃತಪಟ್ಟಿದ್ದಾರೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande