
ನವದೆಹಲಿ, 25 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಸಂಜೆ ಭಾರತೀಯ ಜನತಾ ಪಕ್ಷದ ಕೇಂದ್ರ ಕಚೇರಿಗೆ ತೆರಳಿ ಏಕಾತ್ಮ ಮಾನವ ದರ್ಶನದ ಪ್ರತಿಪಾದಕ ಪಂಡಿತ್ ದೀನದಯಾಳ ಉಪಾಧ್ಯಾಯ ಅವರ ಜಯಂತಿ ಅಂಗವಾಗಿ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಲಿದ್ದಾರೆ.
ಪಕ್ಷದ ಮೂಲಗಳ ಪ್ರಕಾರ, ಪ್ರತಿವರ್ಷ ಸೆಪ್ಟೆಂಬರ್ 25ರಂದು ದೀನದಯಾಳ ಉಪಾಧ್ಯಾಯ ಜಯಂತಿಯನ್ನು ಆಚರಿಸಲಾಗುತ್ತದೆ. ಬಿಜೆಪಿ ಪಾಲಿಗೆ ಸಂಘಟನೆ ಹಾಗೂ ಸೈದ್ಧಾಂತಿಕ ದೃಷ್ಟಿಯಿಂದ ಈ ದಿನ ಮಹತ್ವದ್ದಾಗಿದೆ. ಪ್ರತಿವರ್ಷ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪಕ್ಷದ ಹಲವು ನಾಯಕರು ದೀನದಯಾಳ ಉಪಾಧ್ಯಾಯ ಅವರ ಕೊಡುಗೆ ಹಾಗೂ ವಿಚಾರಗಳನ್ನು ಸ್ಮರಿಸಿ ಗೌರವ ಸಲ್ಲಿಸುತ್ತಾರೆ.
ಬಿಜೆಪಿಯ ಸೈದ್ಧಾಂತಿಕ ಹಿನ್ನೆಲೆಯ ಪ್ರಮುಖ ನಾಯಕರಲ್ಲಿ ಒಬ್ಬರಾಗಿದ್ದ ದೀನದಯಾಳ ಉಪಾಧ್ಯಾಯ ಅವರು ಏಕಾತ್ಮ ಮಾನವ ದರ್ಶನದ ಪರಿಕಲ್ಪನೆಯನ್ನು ಪ್ರತಿಪಾದಿಸಿದ್ದರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅಭಿವೃದ್ಧಿಯ ಪ್ರಯೋಜನ ತಲುಪಬೇಕು ಹಾಗೂ ಭಾರತದ ಪರಿಸ್ಥಿತಿಗೆ ಅನುಗುಣವಾದ ಅಭಿವೃದ್ಧಿ ದೃಷ್ಟಿಕೋನ ಇರಬೇಕು ಎಂಬುದಕ್ಕೆ ಅವರು ಒತ್ತು ನೀಡಿದ್ದರು.
--------
ಹಿಂದೂಸ್ತಾನ್ ಸಮಾಚಾರ್ / Rakesh.M.B.