ನಾಳೆ ಎಸ್ಐಆರ್ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಬೆಂಗಳೂರು, 25 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದ ವಿಶೇಷ ತೀವ್ರ ಪರಿಷ್ಕರಣೆ ಕ್ರಮದ ವಿರುದ್ಧ ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಚುನಾವಣಾ ಆಯೋಗದ ಕ್ರಮವನ್ನು ಖಂಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರ
BK Hariprasad calls for massive protest against SIR, demands CEC Gyanesh Kumar’s resignation


ಬೆಂಗಳೂರು, 25 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ಮತದಾರರ ಪಟ್ಟಿ ಪರಿಷ್ಕರಣೆಗೆ ಸಂಬಂಧಿಸಿದ ವಿಶೇಷ ತೀವ್ರ ಪರಿಷ್ಕರಣೆ ಕ್ರಮದ ವಿರುದ್ಧ ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಚುನಾವಣಾ ಆಯೋಗದ ಕ್ರಮವನ್ನು ಖಂಡಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಚುನಾವಣಾ ಆಯುಕ್ತರು ಇತರೆ ಚುನಾವಣಾ ಆಯುಕ್ತರ ಭಿನ್ನಾಭಿಪ್ರಾಯವನ್ನು ತಳ್ಳಿ ಹಾಕಿ ಎಸ್ಐಆರ್ ಕೈಗೊಂಡಿರುವುದು ಸರಿಯಲ್ಲ ಎಂದು ಹೇಳಿದರು. “ಇಂತಹ ಏಕಪಕ್ಷೀಯ ಕ್ರಮವನ್ನು ಸಭ್ಯ ನಾಗರಿಕರು ಸಹಿಸಲು ಸಾಧ್ಯವಿಲ್ಲ.

ಇದರಿಂದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನೇ ಬುಡಮೇಲು ಮಾಡಿದಂತಾಗಿದೆ” ಎಂದು ಆರೋಪಿಸಿದರು.

ಕರ್ನಾಟಕದಲ್ಲಿಯೂ ಮತದಾರರ ಪಟ್ಟಿಯಲ್ಲಿ ಲೋಪಗಳಾಗಿವೆ ಎಂದು ಹೇಳಿದ ಹರಿಪ್ರಸಾದ್, ಏಕಪಕ್ಷೀಯವಾಗಿ ಕೈಗೊಂಡಿರುವ ಕ್ರಮ ಖಂಡನೀಯ ಎಂದರು.

ಎಸ್ಐಆರ್ಗೆ ಸಂಬಂಧಿಸಿದ ಕ್ರಮಗಳಿಗೆ ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರು ಕುಮ್ಮಕ್ಕು ನೀಡಿದ್ದಾರೆ ಎಂದು ಅವರು ಆರೋಪಿಸಿದರು.

“ಇದು ದೇಶದ್ರೋಹದ ಕೆಲಸ. ಇದಕ್ಕಿಂತ ಬೇರೆ ಪದ ಬಳಸಲು ಸಾಧ್ಯವಿಲ್ಲ. ಕೂಡಲೇ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ಪಡೆದು ಅವರನ್ನು ಬಂಧಿಸಬೇಕು” ಎಂದು ಹರಿಪ್ರಸಾದ್ ಆಗ್ರಹಿಸಿದರು.

ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ನಾಳೆ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬೃಹತ್ ಹೋರಾಟ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಹೋರಾಟಕ್ಕೆ ಇತರೆ ರಾಜಕೀಯ ಪಕ್ಷಗಳಿಗೂ ಆಹ್ವಾನ ನೀಡಲಾಗಿದೆ. ಇದೇ ವೇಳೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಪ್ರತಿಭಟನೆ ನಡೆಸಲು ಕರೆ ನೀಡಲಾಗಿದೆ ಎಂದು ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande