ಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡ
ಬಳ್ಳಾರಿ, 25 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈಳಿಗೆ ಮಣೆಯಿಂದ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಅಪರಾಧಿಗೆ ಬಳ್ಳಾರಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂ. 61,000 ದಂಡ ವಿಧಿಸಿ ತೀರ್ಪು ನೀಡಿ
ಹಲ್ಲೆ ಪ್ರಕರಣ: ಅಪರಾಧಿಗೆ 3 ವರ್ಷ ಜೈಲು, ರೂ. 61,000 ದಂಡ


ಬಳ್ಳಾರಿ, 25 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್: ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಈಳಿಗೆ ಮಣೆಯಿಂದ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಅಪರಾಧಿಗೆ ಬಳ್ಳಾರಿಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು 3 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ರೂ. 61,000 ದಂಡ ವಿಧಿಸಿ ತೀರ್ಪು ನೀಡಿದೆ.

ಸಿರುಗುಪ್ಪ ತಾಲೂಕಿನ ಕುರುವಳ್ಳಿ ಗ್ರಾಮದ ನಿವಾಸಿ ಶೇಖರ ಶಿಕ್ಷೆಗೆ ಗುರಿಯಾದ ವ್ಯಕ್ತಿ. ಕುಡಿದು ಗಲಾಟೆ ಮಾಡಬೇಡ ಎಂದು ಬುದ್ಧಿವಾದ ಹೇಳಿದ್ದಕ್ಕೆ ದ್ವೇಷ ಕಟ್ಟಿಕೊಂಡಿದ್ದ ಶೇಖರ, 2025ರ ಫೆಬ್ರವರಿ 27ರ ರಾತ್ರಿ ದೂರುದಾರರ ಮೇಲೆ ಈಳಿಗೆ ಮಣೆಯಿಂದ ಕೊಚ್ಚಿ ಕೊಲೆಗೆ ಯತ್ನಿಸಿದ್ದನು. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಗೆ ಮೂಳೆ ಮುರಿತವಾಗಿತ್ತು.

ಹಚ್ಚೊಳ್ಳಿ ಠಾಣೆ ಪೊಲೀಸರು ದಾಖಲಿಸಿದ್ದ ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಿದ್ದಲಿಂಗಪ್ರಭು ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಈ ಶಿಕ್ಷೆ ವಿಧಿಸಿದ್ದಾರೆ. ದಂಡದ ಮೊತ್ತದಲ್ಲಿ ಶೇ. 95 ರಷ್ಟನ್ನು ಸಂತ್ರಸ್ತರಿಗೆ ನೀಡುವಂತೆ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ಹೆಚ್ಚುವರಿ ಪರಿಹಾರ ಒದಗಿಸುವಂತೆ ನ್ಯಾಯಾಲಯ ಆದೇಶಿಸಿದೆ. ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕ ಎಂ.ಬಿ. ಸುಂಕಣ್ಣ ವಾದ ಮಂಡಿಸಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande