ಬಳ್ಳಾರಿ : ಸೆಪ್ಟೆಂಬರ್ 30ರಂದು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ: ನೋಂದಣಿಗೆ ಆಹ್ವಾನ
ಬಳ್ಳಾರಿ, 25 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ 2026-27ನೇ ಸಾಲಿನ ಕಲ್ಬುರ್ಗಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು (ಸಿ.ಎಂ. ಕಪ್ 2026) ಸೆಪ್ಟೆಂಬರ್ 30 ರಂದು ಬೆಳಿಗ್ಗೆ 11 ಗಂಟೆಗೆ ಬಳ್ಳಾರಿ ನಗರ
ಬಳ್ಳಾರಿ : ಸೆಪ್ಟೆಂಬರ್ 30ರಂದು ವಿಭಾಗ ಮಟ್ಟದ ದಸರಾ ಕ್ರೀಡಾಕೂಟ: ನೋಂದಣಿಗೆ ಆಹ್ವಾನ


ಬಳ್ಳಾರಿ, 25 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ 2026-27ನೇ ಸಾಲಿನ ಕಲ್ಬುರ್ಗಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟವನ್ನು (ಸಿ.ಎಂ. ಕಪ್ 2026) ಸೆಪ್ಟೆಂಬರ್ 30 ರಂದು ಬೆಳಿಗ್ಗೆ 11 ಗಂಟೆಗೆ ಬಳ್ಳಾರಿ ನಗರದ ಜಿಲ್ಲಾ ಕ್ರೀಡಾಂಗಣ ಮೈದಾನದಲ್ಲಿ ಆಯೋಜಿಸಲಾಗಿದೆ.

ಕಲ್ಬುರ್ಗಿ ವಿಭಾಗ ವ್ಯಾಪ್ತಿಯ ಎಲ್ಲಾ ಜಿಲ್ಲೆಗಳ ಹಾಕಿ, ಬಾಕ್ಸಿಂಗ್ ಹಾಗೂ ಫುಟ್ಬಾಲ್ ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಕ್ರೀಡಾಪಟುಗಳು ಜಿಲ್ಲಾ ಕ್ರೀಡಾಂಗಣದಲ್ಲಿ ಗುರುತಿನ ಚೀಟಿಯೊಂದಿಗೆ ಹಾಜರಾಗಿ ವರದಿ ಮಾಡಿಕೊಳ್ಳಬೇಕು.

ಕ್ರೀಡಾಕೂಟದಲ್ಲಿ ಕರ್ನಾಟಕ ರಾಜ್ಯದ ನಿವಾಸಿಗಳಾದ ಕ್ರೀಡಾಪಟುಗಳಿಗೆ ಮಾತ್ರ ಭಾಗವಹಿಸಲು ಅವಕಾಶವಿರುತ್ತದೆ. ಒಬ್ಬ ಕ್ರೀಡಾಪಟು ಕೇವಲ ಒಂದು ಗುಂಪು ಕ್ರೀಡೆಯಲ್ಲಿ ಮಾತ್ರ ಭಾಗವಹಿಸಲು ಅವಕಾಶವಿದೆ.

ವಿದ್ಯಾರ್ಥಿಗಳು ಅಥವಾ ನೌಕರಿಯಲ್ಲಿರುವ ಕ್ರೀಡಾಪಟುಗಳು ತಮ್ಮ ಶಿಕ್ಷಣ ಸಂಸ್ಥೆ ಅಥವಾ ಸಂಸ್ಥೆಯ ಮಾನ್ಯತೆ ಪಡೆದ ಗುರುತಿನ ಚೀಟಿಯೊಂದಿಗೆ ಹಾಜರಾಗುವುದು ಕಡ್ಡಾಯ. ರಕ್ಷಣಾ ಪಡೆ ಹಾಗೂ ಅರೆ ರಕ್ಷಣಾ ಪಡೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಕ್ರೀಡಾಪಟುಗಳು ಭಾಗವಹಿಸಲು ಅರ್ಹರಿರುವುದಿಲ್ಲ.

ಪ್ರಸಕ್ತ ಸಾಲಿನಿಂದ ತಾಲೂಕು, ಜಿಲ್ಲಾ ಹಾಗೂ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಕ್ರೀಡಾಪಟುಗಳು ಮೊಬೈಲ್ ಆಪ್ ಅಥವಾ ಅಧಿಕೃತ ವೆಬ್ ಪೆÇೀರ್ಟಲ್ (https://dasaracmcup.in/) ಮೂಲಕ ‘‘Dasara

CM Cup 2026 Sports Registration' ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು.

ನೋಂದಣಿ ಪ್ರತಿಯನ್ನು ಹಾಜರುಪಡಿಸಿದಲ್ಲಿ ಮಾತ್ರ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗುತ್ತದೆ.

ಭಾಗವಹಿಸುವ ಕ್ರೀಡಾಪಟುಗಳಿಗೆ ಊಟದ ವ್ಯವಸ್ಥೆ ಹಾಗೂ ಸರ್ಕಾರಿ ಬಸ್ ದರಕ್ಕೆ ಅನುಗುಣವಾಗಿ ಪ್ರಯಾಣ ಭತ್ಯೆಯನ್ನು ‘ಕೆ-2' ಮೂಲಕ ನೇರವಾಗಿ ಕ್ರೀಡಾಪಟುಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು.

ಹೆಚ್ಚಿನ ಮಾಹಿತಿಗೆ ಎಂ. ಜಾಕೀರ್: 9036335986, ಮಹ್ಮದ್ ಮಸೂದ್: 9886688858, ರತಿಕಾಂತ್ (ಕಚೇರಿ ಸಿಬ್ಬಂದಿ): 8971238689 ಅಥವಾ ಸಹಾಯವಾಣಿ ಸಂಖ್ಯೆ: 155265 ನ್ನು ಸಂರ್ಪಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande