ಪರಿಷತ್ ಚುನಾವಣೆ: ಸ್ವೀಪ್ ಸಮಿತಿ ರಚನೆ
ಗದಗ, 25 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್:- ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರಕ್ಕೆ ದೈವಾರ್ಷಿಕ ಚುನಾವಣೆ 2026 ನೇದ್ದಕ್ಕೆ ಸಂಬಂಧಿಸಿದಂತೆ, ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಹಾಗೂ ಮತದಾರರ ಭಾಗವಹಿಸುವಿಕೆ (ಸ್ವೀಪ್ ) ಸಲುವಾಗಿ ಸಮಗ್ರ ಕ್ರಿಯಾ ಯೋಜನೆಯನ್ನು ತಯರಿಸಿ ಆರಿವು ಮೂಡಿಸುವ ಕಾರ್ಯ ಜರುಗಿ
ಫೋಟೋ


ಗದಗ, 25 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:- ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರಕ್ಕೆ ದೈವಾರ್ಷಿಕ ಚುನಾವಣೆ 2026 ನೇದ್ದಕ್ಕೆ ಸಂಬಂಧಿಸಿದಂತೆ, ಮತದಾರರಿಗೆ ವ್ಯವಸ್ಥಿತ ಶಿಕ್ಷಣ ಹಾಗೂ ಮತದಾರರ ಭಾಗವಹಿಸುವಿಕೆ (ಸ್ವೀಪ್ ) ಸಲುವಾಗಿ ಸಮಗ್ರ ಕ್ರಿಯಾ ಯೋಜನೆಯನ್ನು ತಯರಿಸಿ ಆರಿವು ಮೂಡಿಸುವ ಕಾರ್ಯ ಜರುಗಿಸಬೇಕಾಗಿರುತ್ತದೆ. ಕಾರಣ, ಈ ಹಿಂದೆ ಲೋಕಸಭಾ ಸಾರ್ವತ್ರಿಕ ಚುನಾವಣೆಗಳ ಸಂದರ್ಭದಲ್ಲಿ ರಚಿಸಲಾದ ಜಿಲ್ಲಾ ಮಟ್ಟದಲ್ಲಿ ಸ್ವೀಪ್ ಸಮಿತಿಯನ್ನು ಪುನರ್ ಸಕ್ರಿಯೆಗೊಳಿಸಲು ಸಮಿತಿಯನ್ನು ಕಾರ್ಯಗತಗೊಳಿಸಿ ವ್ಯವಸ್ಥಿತವಾಗಿ ಚುನಾವಣೆಯಲ್ಲಿ ಭಾಗವಹಿಸುವ ಕುರಿತು ಆರಿವು ಮೂಡಿಸುವ ಕಾರ್ಯವನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಬೇಕಾದ ಹಿನ್ನೆಲೆಯಲ್ಲಿ ಈ ಕೆಳಗಿನಂತೆ ಸ್ವೀಪ್ ಸಮಿತಿಯನ್ನು ಪುನರ್ ರಚಿಸಲಾಗಿದೆ.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾ ಅಧಿಕಾರಿಗಳು ಅಧ್ಯಕ್ಷರು/ನೋಡಲ್ ಅಧಿಕಾರಿಗಳು, ಜಿಲ್ಲಾ ವಾರ್ತಾಧಿಕಾರಿಗಳು ಸದಸ್ಯ ಕಾರ್ಯದರ್ಶಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಪನಿರ್ದೇಶಕರು ಸದಸ್ಯರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಸದಸ್ಯರು, ಸಮಾಜ ಕಲ್ಯಾಣಾ ಇಲಾಖೆ ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳು ಸದಸ್ಯರು, ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಇಲಾಖೆ ಜಿಲ್ಲಾ ಅಧಿಕಾರಿಗಳು, ಸದಸ್ಯರು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಸದಸ್ಯರು, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಸದಸ್ಯರು, ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕರು ಸದಸ್ಯರು, ಜಿಲ್ಲಾ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಸದಸ್ಯರು, ಜಿಲ್ಲಾ ಯುವಜನ ಸಮನ್ವಯ ಅಧಿಕಾರಿಗಳು ಸದಸ್ಯರು, ಎನ್.ಎಸ್. ಎಸ್. ಜಿಲ್ಲಾ ಸಂಘಟಕರು ಸದಸ್ಯರು, ಡಿಯುಡಿಸಿ ಯೋಜನಾ ನಿರ್ದೇಶಕರು ಸದಸ್ಯರು, ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತರು ಸದಸ್ಯರು, ಲಕ್ಷ್ಮೇಶ್ವರ ಮುಂಡರಗಿ ರೋಣ ಗಜೇಂದ್ರಗಡ ಹಾಗೂ ನರಗುಂದ ಪುರಸಭೆ ಮುಖ್ಯಾಧಿಕಾರಿಗಳು ಸದಸ್ಯರು, ಮುಳಗುಂದ, ಶಿರಹಟ್ಟಿ ಹಾಗೂ ನರೇಗಲ್ ಪಟ್ಟಣ ಪಂಚಾಯತ ಮುಖ್ಯಾಧಿಕಾರಿಗಳು ಸದಸ್ಯರು.

ಮೇಲಿನಂತೆ ರಚಿಸಲಾದ ಸಮಿತಿಯ ಅಧ್ಯಕ್ಷರು / ಸದಸ್ಯರು ಭಾರತ ಚುನಾವಣಾ ಆಯೋಗ ನೀಡಿರುವ ಹಾಗೂ ಮುಂದೆ ಕಾಲಕಾಲಕ್ಕೆ ನೀಡುವ ನಿರ್ದೇಶನಗಳಂತೆ ಕರ್ತವ್ಯಗಳನ್ನು ನಿರ್ವಹಿಸತಕ್ಕದ್ದು. ಅದರಂತೆ ಚುನಾವಣಾ ಆಯೋಗದಿಂದ ಪ್ರಾದೇಶಿಕ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗಳಿಂದ ಕಾಲಕಾಲಕ್ಕೆ ಈ ಕುರಿತು ಬರುವ ನಿರ್ದೇಶನಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಸಿ.ಎನ್. ಶ್ರೀಧರ ಅವರು ಆದೇಶದಲ್ಲಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande