ಬಳ್ಳಾರಿ : ರೈತರ ಸಾಲ ಮನ್ನಾ, ಪ್ರತಿ ಎಕರೆಗೆ 30 ಸಾವಿರ ಪರಿಹಾರಕ್ಕೆ ಜೆಡಿಎಸ್ ಆಗ್ರಹ
ಬಳ್ಳಾರಿ, 25 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಪ್ರತಿ ಎಕರೆಗೆ 30 ಸಾವಿರ ರೂಪಾಯಿ ಪರಿಹಾರ ಮತ್ತು ಬೆಳೆ ಸಾಲ ಮನ್ನಾ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾ ಜೆಡಿಎಸ್ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದೆ. ಜೆಡಿಎಸ್ನ ಬಳ್ಳಾರಿ ಜಿಲ್ಲಾಧ್ಯಕ್ಷ ಮೀನಳ
JDS demands loan waiver and compensation for farmers


JDS demands loan waiver and compensation for farmers


JDS demands loan waiver and compensation for farmers


ಬಳ್ಳಾರಿ, 25 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಪ್ರತಿ ಎಕರೆಗೆ 30 ಸಾವಿರ ರೂಪಾಯಿ ಪರಿಹಾರ ಮತ್ತು ಬೆಳೆ ಸಾಲ ಮನ್ನಾ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ

ಜಿಲ್ಲಾ ಜೆಡಿಎಸ್ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದೆ.

ಜೆಡಿಎಸ್ನ ಬಳ್ಳಾರಿ ಜಿಲ್ಲಾಧ್ಯಕ್ಷ ಮೀನಳ್ಳಿ ತಾಯಣ್ಣ ಅವರು ಪ್ರತಿಭಟನೆಯ ನೇತೃತ್ವವಹಿಸಿ, ಗ್ರಾಮೀಣ ಕೃಷಿ ಕೂಲಿಕಾರರಿಗೆ ಕೂಲಿ ಕೆಲಸ ನೀಡಬೇಕು. ಸಮರ್ಪಕ ಕುಡಿವ ನೀರಿನ ಪೂರೈಕೆಗೆ ಅಗತ್ಯ ಕ್ರಮಕೈಗೊಳ್ಳಬೇಕು. ಜಾನುವಾರುಗಳಿಗೆ ನೀರು ಹಾಗೂ ಮೇವು ಬ್ಯಾಂಕ್ ಸ್ಥಾಪನೆ ಮಾಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಜೆಡಿಎಸ್ ಕಚೇರಿಯಿಂದ ಪ್ರಾರಂಭವಾದ ಪಾದಯಾತ್ರೆಯು ಗಡಿಗೆ ಚೆನ್ನಪ್ಪ ವೃತ್ತದಲ್ಲಿ ಸಮಾವೇಶಗೊಂಡು ಕರ್ನಾಟಕ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಮಾನಸರಪಳಿಯನ್ನು ನಿರ್ಮಿಸಿ ಪ್ರತಿಭಟನೆ ನಡೆಸಿದರು.

ಜೆಡಿಎಸ್ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಲಕ್ಷ್ಮೀಕಾಂತರೆಡ್ಡಿ ಅವರು, ರೈತರೇ ದೇಶದ ಬೆನ್ನೆಲೆಬು. ನಮ್ಮ ಸರ್ಕಾರ ರೈತರ ಪರವಾಗಿದೆ ಎಂದು ಹೇಳುವ ಸರ್ಕಾರ, ರೈತ ವಿರೋಧಿ ಸರ್ಕಾರವಾಗಿದೆ. ಕರ್ನಾಟಕದಲ್ಲಿ ಭೀಕರ ಬರಗಾಲ ಎದುರಾಗಿದೆ. ಸರ್ಕಾರ ಮತ್ತು ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದೆ ಎಂದರು.

ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೊನ್ನೂರು ಸ್ವಾಮಿ (ವಂಡ್ರಿ), ಎಸ್ಟಿ ಘಟಕದ ಜಿಲ್ಲಾಧ್ಯಕ್ಷ ಅದ್ದಿಗೇರಿ ರಾಮಣ್ಣ, ಎಸ್ಸಿ ಮೋರ್ಚಾ ಅಧ್ಯಕ್ಷ ವಸಂತಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಪುಷ್ಪಾ, ಮಾಧ್ಯಮ ಸಂಚಾಲಕ ರವಿಕುಮಾರ್ ಮೀನಳ್ಳಿ, ಜಮೀಲಾ, ಮೇಘರಾಜ್, ರಾಜೂ ಹೊನ್ನಳ್ಳಿ, ಬಸವ ಅವ್ವನಬಾವಿ, ರುದ್ರಪ್ಪ, ಚಾಗನೂರು ನಾಗರಾಜ್, ರಾಮಾಂಜಿನಿ ಸೇರಿದಂತೆ ನೂರಾರು ಕಾರ್ಯಕರ್ತರು, ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande