ಐಹೊಳೆ ಸ್ವಚ್ಛತಾ ಅಭಿಯಾನದಲ್ಲಿ ಶಾಸಕ ಉಮೇಶ ಮೇಟಿ ಭಾಗಿ: ಸ್ವಚ್ಛತೆ ಕಾಪಾಡಲು ಸಾರ್ವಜನಿಕರಿಗೆ ಕರೆ
ಬಾಗಲಕೋಟೆ, 25 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಐತಿಹಾಸಿಕ ಐಹೊಳೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನದಲ್ಲಿ ಶಾಸಕ ಉಮೇಶ ಮೇಟಿ ಭಾಗವಹಿಸಿ, ಸಾರ್ವಜನಿಕರೊಂದಿಗೆ ಸ್ವಚ್ಛತಾ ಕಾರ್ಯ ಕೈಗೊಂಡರು. ಐತಿಹಾಸಿಕ ಹಿನ್ನೆಲೆ ಹೊಂದಿರುವ ಐಹೊಳೆ ಗ್ರಾಮವು
ಸ್ವಚತೆ


ಬಾಗಲಕೋಟೆ, 25 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಐತಿಹಾಸಿಕ ಐಹೊಳೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನದಲ್ಲಿ ಶಾಸಕ ಉಮೇಶ ಮೇಟಿ ಭಾಗವಹಿಸಿ, ಸಾರ್ವಜನಿಕರೊಂದಿಗೆ ಸ್ವಚ್ಛತಾ ಕಾರ್ಯ ಕೈಗೊಂಡರು.

ಐತಿಹಾಸಿಕ ಹಿನ್ನೆಲೆ ಹೊಂದಿರುವ ಐಹೊಳೆ ಗ್ರಾಮವು ಪ್ರವಾಸಿಗರನ್ನು ಆಕರ್ಷಿಸುವ ಪ್ರಮುಖ ತಾಣವಾಗಿದ್ದು, ಇಲ್ಲಿನ ಐತಿಹಾಸಿಕ ಸ್ಮಾರಕಗಳು, ದೇವಾಲಯಗಳು ಹಾಗೂ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಕಾಪಾಡುವ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನಕ್ಕೆ ಸ್ಥಳೀಯರಿಂದ ಉತ್ತಮ ಸ್ಪಂದನೆ ದೊರೆಯಿತು.

ಅಭಿಯಾನದಲ್ಲಿ ಶಾಸಕ ಉಮೇಶ ಮೇಟಿ ಅವರು ಸ್ವತಃ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡು, ಸಾರ್ವಜನಿಕರಿಗೆ ಸ್ವಚ್ಛತೆಯ ಮಹತ್ವದ ಕುರಿತು ಜಾಗೃತಿ ಮೂಡಿಸಿದರು. ‘ಸ್ವಚ್ಛ ಗ್ರಾಮ–ಸುಂದರ ಗ್ರಾಮ’ ನಿರ್ಮಾಣಕ್ಕೆ ಪ್ರತಿಯೊಬ್ಬರೂ ಕೈಜೋಡಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯದೆ, ಕಸವನ್ನು ನಿಗದಿತ ಸ್ಥಳದಲ್ಲೇ ವಿಲೇವಾರಿ ಮಾಡುವ ಮೂಲಕ ಪರಿಸರ ಸಂರಕ್ಷಣೆಗೆ ಸಹಕರಿಸಬೇಕು ಎಂದು ಅವರು ಕರೆ ನೀಡಿದರು.

ಐಹೊಳೆ ಐತಿಹಾಸಿಕ ಪರಂಪರೆಯ ತಾಣವಾಗಿರುವುದರಿಂದ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಉತ್ತಮ ಪರಿಸರ ಹಾಗೂ ಸ್ವಚ್ಛ ವಾತಾವರಣ ಕಲ್ಪಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಐತಿಹಾಸಿಕ ಸ್ಮಾರಕಗಳ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದರಿಂದ ಪ್ರವಾಸೋದ್ಯಮಕ್ಕೂ ಉತ್ತೇಜನ ದೊರೆಯಲಿದೆ ಎಂದು ಅಭಿಪ್ರಾಯ ವ್ಯಕ್ತವಾಯಿತು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande