ಮೈಸೂರು ದಸರಾ: ಅ.11ರಿಂದ ಆರಂಭ, 21ರಂದು ಜಂಬೂಸವಾರಿ
ಅ.11ರಿಂದ ಆರಂಭ, 21ರಂದು ಜಂಬೂಸವಾರಿ
Mysuru-Dasara-to-begin-on-October-11-Jumbo-Savari-on-October-21


ಮೈಸೂರು, 25 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅಕ್ಟೋಬರ್ 11ರಂದು ಚಾಲನೆ ದೊರೆಯಲಿದ್ದು, ಅಕ್ಟೋಬರ್ 21ರಂದು ವಿಜಯದಶಮಿ ಜಂಬೂಸವಾರಿ ನಡೆಯಲಿದೆ.

ದಸರಾ ಹಿನ್ನೆಲೆಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ವಿವಿಧ ಸಾಂಸ್ಕೃತಿಕ ಹಾಗೂ ಮನರಂಜನಾ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ.

ಈ ಬಾರಿ ದಸರಾ ಮಹೋತ್ಸವದಲ್ಲಿ ಇದೇ ಮೊದಲ ಬಾರಿಗೆ ಕರಾವಳಿಯ ಪ್ರಸಿದ್ಧ ಕ್ರೀಡೆಯಾದ ಕಂಬಳ ಆಯೋಜಿಸಲಾಗುತ್ತಿದೆ. ಇದರಿಂದ ದಸರಾ ಸಂಭ್ರಮಕ್ಕೆ ಮತ್ತಷ್ಟು ಮೆರುಗು ಬರಲಿದೆ

ಇದೇ ವೇಳೆ, ಹಲವು ವರ್ಷಗಳಿಂದ ಚಿನ್ನದ ಅಂಬಾರಿ ಹೊರುತ್ತಿದ್ದ ಅಭಿಮನ್ಯು ಆನೆ ಈ ಬಾರಿ ಆ ಕರ್ತವ್ಯದಿಂದ ನಿವೃತ್ತಿ ಹೊಂದಿದೆ. ಹೀಗಾಗಿ ಈ ವರ್ಷದ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿಯನ್ನು ಯಾವ ಆನೆ ಹೊತ್ತು ಸಾಗಲಿದೆ ಎಂಬುದು ಕುತೂಹಲ ಮೂಡಿಸಿದೆ. ಹೊಸ ಅಂಬಾರಿ ಸಾರಥಿಯ ಆಯ್ಕೆ ಪ್ರಕ್ರಿಯೆಯೂ ನಡೆಯಲಿದೆ.

“ಅ.11ರಿಂದ 21ರವರೆಗೆ ದಸರಾ ಮಹೋತ್ಸವ ನಡೆಯಲಿದ್ದು, ಪ್ರವಾಸಿಗರನ್ನು ಸೆಳೆಯುವ ಹಲವು ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಇದೇ ಮೊದಲ ಬಾರಿಗೆ ಕಂಬಳ ಆಯೋಜಿಸುತ್ತಿರುವುದು ಈ ಬಾರಿಯ ದಸರಾ ವಿಶೇಷವಾಗಿದೆ.

ಅಭಿಮನ್ಯು ನಿವೃತ್ತಿಯಾಗಿರುವ ಹಿನ್ನೆಲೆಯಲ್ಲಿ ಹೊಸ ಆನೆ ಚಿನ್ನದ ಅಂಬಾರಿ ಹೊರುವ ಕುರಿತು ಶೀಘ್ರದಲ್ಲೇ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು” ಎಂದು ಅಧಿಕಾರಿಗಳು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande