

ಬಳ್ಳಾರಿ, 25 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ವೀರಶೈವ ವಿದ್ಯಾವರ್ಧಕ ಸಂಘದ ಹಾನಗಲ್ಲು ಶ್ರೀ ಕುಮಾರೇಶ್ವರ ಪಾಲಿಟೆಕ್ನಿಕ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಂಸ್ಥಾಪನಾ ದಿನವನ್ನು ಕಾಲೇಜಿನ ಆವರಣದಲ್ಲಿ ಯಶಸ್ವಿಯಾಗಿ ಆಚರಿಸಲಾಯಿತು.
ಕಾಲೇಜಿನ ಎನ್ಎಸ್ಎಸ್ ಅಧಿಕಾರಿ ಜೆ.ಎಂ. ರಾಜೇಶಕುಮಾರ್ ಅವರು ರಾಷ್ಟ್ರೀಯ ಸೇವಾ ಯೋಜನೆಯ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಬಿ. ಶ್ರೀಶೈಲಗೌಡ ಮತ್ತು ಸಿಬ್ಬಂದಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಎನ್ಎಸ್ಎಸ್ನ ಸಮನ್ವಯ ಅಧಿಕಾರಿ ಕೆ. ಪಂಪನಗೌಡ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್