ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಬೂದಿದಿಬ್ಬದಲ್ಲಿ ಸ್ವಚ್ಛತಾ ಹಿ ಸೇವಾ ಅಭಿಯಾನ
ಕುಡತಿನಿ, 25 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ವಿಶ್ವ ಪ್ರವಾಸೋದ್ಯಮ ದಿನಾಚರಣೆ - 2026ರ ಅಂಗವಾಗಿ ‘ಸ್ವಚ್ಛತಾ ಪಕ್ವಾಡ’ ಹಾಗೂ ‘ಸ್ವಚ್ಛತಾ ಹಿ ಸೇವಾ’ ಕಾರ್ಯಕ್ರಮವನ್ನು ಕುಡುತಿನಿ–ತೋರಣಗಲ್ಲು ರಾಷ್ಟ್ರೀಯ ಹೆದ್ದಾರಿ 67ರ ಮಧ್ಯದಲ್ಲಿರುವ ಐತಿಹಾಸಿಕ ಬೂದಿದಿಬ್ಬ ಬಳಿ ಶುಕ್ರವಾರ ಆಯೋಜಿಸಲಾಗಿತ್ತು. ಪ್
ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಬೂದಿದಿಬ್ಬದಲ್ಲಿ ‘ಸ್ವಚ್ಛತಾ ಹಿ ಸೇವಾ’


ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಬೂದಿದಿಬ್ಬದಲ್ಲಿ ‘ಸ್ವಚ್ಛತಾ ಹಿ ಸೇವಾ’


ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಬೂದಿದಿಬ್ಬದಲ್ಲಿ ‘ಸ್ವಚ್ಛತಾ ಹಿ ಸೇವಾ’


ವಿಶ್ವ ಪ್ರವಾಸೋದ್ಯಮ ದಿನಾಚರಣೆ : ಬೂದಿದಿಬ್ಬದಲ್ಲಿ ‘ಸ್ವಚ್ಛತಾ ಹಿ ಸೇವಾ’


ಕುಡತಿನಿ, 25 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್: ವಿಶ್ವ ಪ್ರವಾಸೋದ್ಯಮ ದಿನಾಚರಣೆ - 2026ರ ಅಂಗವಾಗಿ ‘ಸ್ವಚ್ಛತಾ ಪಕ್ವಾಡ’ ಹಾಗೂ ‘ಸ್ವಚ್ಛತಾ ಹಿ ಸೇವಾ’ ಕಾರ್ಯಕ್ರಮವನ್ನು ಕುಡುತಿನಿ–ತೋರಣಗಲ್ಲು ರಾಷ್ಟ್ರೀಯ ಹೆದ್ದಾರಿ 67ರ ಮಧ್ಯದಲ್ಲಿರುವ ಐತಿಹಾಸಿಕ ಬೂದಿದಿಬ್ಬ ಬಳಿ ಶುಕ್ರವಾರ ಆಯೋಜಿಸಲಾಗಿತ್ತು.

ಪ್ರವಾಸೋದ್ಯಮ ಇಲಾಖೆ, ತೋರಣಗಲ್ಲು ಗ್ರಾಮ ಪಂಚಾಯಿತಿ ಹಾಗೂ ಸಾಹಸ್ ಸ್ವಯಂ ಸೇವಾ ಸಂಸ್ಥೆಯ ಸಹಯೋಗದಲ್ಲಿ ಈ ಸ್ವಚ್ಛತಾ ಅಭಿಯಾನ ನಡೆಯಿತು.

ಪ್ರವಾಸಿ ತಾಣಗಳ ಸ್ವಚ್ಛತೆ ಹಾಗೂ ಐತಿಹಾಸಿಕ ತಾಣಗಳ ಸಂರಕ್ಷಣೆಯ ಮಹತ್ವದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕೈಗೊಂಡ ಈ ಕಾರ್ಯಕ್ರಮದಲ್ಲಿ ಬೂದಿದಿಬ್ಬದ ಸುತ್ತಮುತ್ತಲಿನ ತ್ಯಾಜ್ಯವನ್ನು ತೆರವುಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ತೋರಣಗಲ್ಲು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಡಿ. ಕಲ್ಲಪ್ಪ, ಪ್ರವಾಸೋದ್ಯಮ ಇಲಾಖೆಯ ಪ್ರವಾಸಿ ಅಧಿಕಾರಿ ಶ್ರೀಹರಿ ಮಾಸನೂರು, ಸಾಹಸ್ ಸಂಸ್ಥೆಯ ಸ್ವಚ್ಛತಾ ಸಿಬ್ಬಂದಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ, ಪ್ರವಾಸೋದ್ಯಮ ಇಲಾಖೆಯ ಇತರ ಅಧಿಕಾರಿಗಳು ಹಾಗೂ ಪ್ರವಾಸಿ ಮಿತ್ರರು ಉಪಸ್ಥಿತರಿದ್ದು ಶ್ರಮದಾನದಲ್ಲಿ ಪಾಲ್ಗೊಂಡರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande