
ಬೆಂಗಳೂರು, 25 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ನಗರದ ಘನತ್ಯಾಜ್ಯ ನಿರ್ವಹಣಾ ವ್ಯವಸ್ಥೆಯನ್ನು ಸಮಗ್ರವಾಗಿ ಸುಧಾರಿಸಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹೊಸ ಯೋಜನೆ ರೂಪಿಸಿದೆ.
ಇದರಡಿ ಪ್ರತಿದಿನ 9,000 ಟನ್ ತ್ಯಾಜ್ಯ ಸಾಗಿಸುವ ಸಾಮರ್ಥ್ಯವನ್ನು ಕಲ್ಪಿಸುವುದರ ಜೊತೆಗೆ, ಕಸ ಸಂಗ್ರಹಿಸುವ ಸುಮಾರು 4,500 ವಾಹನಗಳಿಗೆ ಜಿಪಿಎಸ್ ಟ್ರ್ಯಾಕಿಂಗ್ ವ್ಯವಸ್ಥೆ ಕಡ್ಡಾಯಗೊಳಿಸಲಾಗಿದೆ.
ನಗರದಲ್ಲಿ ಪ್ರಸ್ತುತ ಪ್ರತಿದಿನ ಸುಮಾರು 6,500 ಟನ್ ಕಸ ಉತ್ಪತ್ತಿಯಾಗುತ್ತಿದ್ದು, ಈಗಿರುವ ವ್ಯವಸ್ಥೆಯಲ್ಲಿ ಸುಮಾರು 5,200 ಟನ್ ತ್ಯಾಜ್ಯ ಸಂಗ್ರಹಿಸುವ ಸಾಮರ್ಥ್ಯವಿದೆ. ಈ ಕೊರತೆ ನೀಗಿಸಲು ಹೊಸ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ ಎಂದು ಜಿಬಿಎ ಆಯುಕ್ತರು ಮಾಹಿತಿ ನೀಡಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R