ಕಲಬುರಗಿಯಲ್ಲಿ ಕಳಪೆ ರಸ್ತೆ ಕಾಮಗಾರಿ:ಗುತ್ತಿಗೆದಾರ ವಿರುದ್ಧ ಕ್ರಮಕ್ಕೆ ಆಗ್ರಹ
ಕಲಬುರಗಿ, 25 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಜಿಲ್ಲೆಯ ಅಫಜಲಪುರ ತಾಲ್ಲೂಕಿನಲ್ಲಿ ಕಲ್ಯಾಣ ಪಥ ಯೋಜನೆಯಡಿ ನಿರ್ಮಿಸಿರುವ ರಸ್ತೆ ಕಾಮಗಾರಿ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ನಾಲ್ಕೈದು ದಿನಗಳ ಹಿಂದಷ್ಟೇ ನಿರ್ಮಿಸಿರುವ ರಸ್ತೆಯ ಡಾಂಬರನ್ನು ಗ್ರಾಮಸ್ಥರು ಕೈಯಿಂದಲೇ ಕಿತ್ತು ತೋರಿಸಿದ್ದು, ಕಾಮಗಾ
kalaburagi-kalyana-patha-road-work-alleged-poor-quality-dambar-peels-off


ಕಲಬುರಗಿ, 25 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ಜಿಲ್ಲೆಯ ಅಫಜಲಪುರ ತಾಲ್ಲೂಕಿನಲ್ಲಿ ಕಲ್ಯಾಣ ಪಥ ಯೋಜನೆಯಡಿ ನಿರ್ಮಿಸಿರುವ ರಸ್ತೆ ಕಾಮಗಾರಿ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದೆ.

ನಾಲ್ಕೈದು ದಿನಗಳ ಹಿಂದಷ್ಟೇ ನಿರ್ಮಿಸಿರುವ ರಸ್ತೆಯ ಡಾಂಬರನ್ನು ಗ್ರಾಮಸ್ಥರು ಕೈಯಿಂದಲೇ ಕಿತ್ತು ತೋರಿಸಿದ್ದು, ಕಾಮಗಾರಿ ಗುಣಮಟ್ಟದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಫಜಲಪುರ ತಾಲ್ಲೂಕಿನ ಎನ್ಎಚ್–34ರಿಂದ ಚಿಂಚೋಳಿ ಗ್ರಾಮದವರೆಗೆ ಸುಮಾರು ಎರಡು ಕಿ.ಮೀ. ಉದ್ದದ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ.

ಸುಮಾರು ₹1.22 ಕೋಟಿ ವೆಚ್ಚದಲ್ಲಿ ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ ಇಲಾಖೆಯ ಮೂಲಕ ಈ ಕಾಮಗಾರಿ ನಡೆದಿದೆ ಎನ್ನಲಾಗಿದೆ.

ರಸ್ತೆ ನಿರ್ಮಾಣ ಪೂರ್ಣಗೊಂಡು ನಾಲ್ಕೈದು ದಿನಗಳಲ್ಲೇ ಡಾಂಬರು ಕಿತ್ತು ಬರುತ್ತಿದೆ. ಗ್ರಾಮಸ್ಥರು ಕೈಯಿಂದಲೇ ಡಾಂಬರನ್ನು ಕಿತ್ತು ತೋರಿಸಿ, ರಸ್ತೆ ಕಾಮಗಾರಿ ಸಂಪೂರ್ಣ ಕಳಪೆಯಾಗಿದೆ ಎಂದು ಆರೋಪಿಸಿದ್ದಾರೆ.

ಗ್ರಾಮಸ್ಥರ ಹೇಳಿಕೆ: “ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ರಸ್ತೆ ನಾಲ್ಕೈದು ದಿನದಲ್ಲೇ ಕಿತ್ತುಬರುತ್ತಿದೆ. ಕಾಮಗಾರಿಯಲ್ಲಿ ಗುಣಮಟ್ಟದ ಸಾಮಗ್ರಿ ಬಳಸಿಲ್ಲ ಎಂಬ ಅನುಮಾನವಿದೆ.

ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ತಪ್ಪಿತಸ್ಥ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ರಸ್ತೆ ಕಾಮಗಾರಿಯ ಗುಣಮಟ್ಟದ ಬಗ್ಗೆ ಪರಿಶೀಲನೆ ನಡೆಸಿ, ಕಳಪೆ ಕಾಮಗಾರಿ ನಡೆದಿದ್ದರೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande