ಮದ್ದೂರು:ವ್ಯವಸಾಯೋತ್ಪನ್ನ ಸಹಕಾರ ಸಂಘದ ಚುನಾವಣೆ: ಜೆಡಿಎಸ್–ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪರ ಪ್ರಚಾರ
ಸೆ.27ರ ವ್ಯವಸಾಯೋತ್ಪನ್ನ ಸಹಕಾರ ಸಂಘದ ಚುನಾವಣೆ: ಜೆಡಿಎಸ್–ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಪರ ಪ್ರಚಾರ
maddur-cooperative-society-election-jds-bjp-alliance-campaign-dc-thammanna-sp-swamy


ಮದ್ದೂರು, 25 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ಸ್ಥಳೀಯ ಮಟ್ಟದಲ್ಲಿ ರಾಜಕೀಯವಾಗಿ ಬಲವರ್ಧನೆಗೊಳ್ಳುವ ಉದ್ದೇಶದಿಂದ ಜೆಡಿಎಸ್–ಬಿಜೆಪಿ ಮೈತ್ರಿ ನಾಯಕರು ಮದ್ದೂರಿನಲ್ಲಿ ವ್ಯವಸಾಯೋತ್ಪನ್ನ ಸಹಕಾರ ಸಂಘದ ಚುನಾವಣೆಗೆ ರಾಜಕೀಯ ತಂತ್ರಗಾರಿಕೆ ರೂಪಿಸಿದ್ದಾರೆ.

ಸೆ.27ರಂದು ನಡೆಯಲಿರುವ ವ್ಯವಸಾಯೋತ್ಪನ್ನ ಸಹಕಾರ ಸಂಘದ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟದ ಬೆಂಬಲಿತ ಅಭ್ಯರ್ಥಿಗಳನ್ನು ಗೆಲ್ಲಿಸಲು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಹಾಗೂ ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ನೇತೃತ್ವದಲ್ಲಿ ಪ್ರಚಾರ ಕಾರ್ಯ ಚುರುಕುಗೊಂಡಿದೆ. ಒಟ್ಟು 11 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದು, ಜೆಡಿಎಸ್ ಮತ್ತು ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಪ್ರಚಾರ ನಡೆಸುತ್ತಿದ್ದಾರೆ.

ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಅವರು ಪ್ರಚಾರಕ್ಕೆ ಚಾಲನೆ ನೀಡಿದ್ದು, ಗ್ರಾಮಗಳಿಗೆ ತೆರಳಿ ಮತದಾರರನ್ನು ಭೇಟಿಯಾಗಿ ಮೈತ್ರಿ ಅಭ್ಯರ್ಥಿಗಳ ಪರ ಮತಯಾಚನೆ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಮೈತ್ರಿ ನಾಯಕರು, “ಮತದಾರರು ಯಾವುದೇ ರೀತಿಯ ಆಮಿಷಗಳಿಗೆ ಒಳಗಾಗಬಾರದು.

ಎನ್ಡಿಎ ಮೈತ್ರಿಕೂಟದ ಬೆಂಬಲಿತ ಅಭ್ಯರ್ಥಿಗಳನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕು. ಸಹಕಾರ ಸಂಘಗಳು ರೈತರ ಪರವಾಗಿ ನಿರಂತರವಾಗಿ ಕೆಲಸ ಮಾಡುತ್ತಿದ್ದು, ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದರೆ ರೈತರಿಗೆ ಅನುಕೂಲವಾಗಲಿದೆ” ಎಂದು ಮನವಿ ಮಾಡಿದರು.

ಮುಂದಿನ ದಿನಗಳಲ್ಲಿ ನಡೆಯಲಿರುವ ತಾಲ್ಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲೂ ಜೆಡಿಎಸ್ ಮತ್ತು ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಮೈತ್ರಿ ಅಭ್ಯರ್ಥಿಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ಈಗಿನಿಂದಲೇ ಸಂಘಟನೆ ಬಲಪಡಿಸುವ ಕುರಿತು ನಾಯಕರು ಚರ್ಚಿಸಿದ್ದಾರೆ.

ಮದ್ದೂರಿನಲ್ಲಿ ಸಹಕಾರ ಸಂಘದ ಚುನಾವಣೆಯ ಮೂಲಕ ತಳಮಟ್ಟದಿಂದಲೇ ರಾಜಕೀಯವಾಗಿ ಮೈತ್ರಿ ಬಲಪಡಿಸುವ ಪ್ರಯತ್ನಕ್ಕೆ ಎರಡೂ ಪಕ್ಷಗಳ ಮುಖಂಡರು ಮುಂದಾಗಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande