
ಮಂಡ್ಯ, 25 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ಐತಿಹಾಸಿಕ ಶ್ರೀರಂಗಪಟ್ಟಣ ದಸರಾ ಮಹೋತ್ಸವದ ಉದ್ಘಾಟನೆಗೆ ಖ್ಯಾತ ನಟ ಕ್ರೇಜಿಸ್ಟಾರ್ ರವಿಚಂದ್ರನ್ ಅವರನ್ನು ಜಿಲ್ಲಾಡಳಿತ ಆಯ್ಕೆ ಮಾಡಿದೆ.
ಅಕ್ಟೋಬರ್ 15ರಿಂದ 18ರವರೆಗೆ ನಡೆಯಲಿರುವ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ರವಿಚಂದ್ರನ್ ಅವರನ್ನು ಅಧಿಕೃತವಾಗಿ ಆಹ್ವಾನಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕುಮಾರ ಹಾಗೂ ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರಮೇಶ್ ಬಾಬು ಅವರು ಬೆಂಗಳೂರಿನಲ್ಲಿರುವ ರವಿಚಂದ್ರನ್ ಅವರ ನಿವಾಸಕ್ಕೆ ತೆರಳಿ ಆಮಂತ್ರಣ ಪತ್ರಿಕೆ ನೀಡಿ, ದಸರಾ ಉದ್ಘಾಟನೆಗೆ ಆಹ್ವಾನಿಸಿದರು.
ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ನಾಲ್ಕು ದಿನಗಳ ಕಾಲ ವಿವಿಧ ಸಾಂಸ್ಕೃತಿಕ ಹಾಗೂ ಕಲಾ ಕಾರ್ಯಕ್ರಮಗಳೊಂದಿಗೆ ಆಚರಿಸಲು ಜಿಲ್ಲಾಡಳಿತ ಸಿದ್ಧತೆ ನಡೆಸಿದೆ.
ಜಿಲ್ಲಾಧಿಕಾರಿ ಕುಮಾರ ಹಾಗೂ ಶಾಸಕ ರಮೇಶ್ ಬಾಬು ಅವರು ರವಿಚಂದ್ರನ್ ಅವರಿಗೆ ದಸರಾ ಉದ್ಘಾಟನೆಗೆ ಅಧಿಕೃತ ಆಹ್ವಾನ ನೀಡಿದ್ದು, ಮಹೋತ್ಸವದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R