ಕಾಂಗೋದಲ್ಲಿ ಭೀಕರ ವಿಮಾನ ಅಪಘಾತ: ಇಬ್ಬರು ಹಿರಿಯ ಸೇನಾಧಿಕಾರಿಗಳು ಸೇರಿ 14 ಮಂದಿ ಸಾವು
ಕಿನ್ಶಾಸಾ, 26 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್: ಆಫ್ರಿಕಾದ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಇಬ್ಬರು ಹಿರಿಯ ಸೇನಾಧಿಕಾರಿಗಳು ಸೇರಿದಂತೆ 14 ಮಂದಿ ಮೃತಪಟ್ಟಿದ್ದಾರೆ. ಶುಕ್ರವಾರ ಈ ದುರ್ಘಟನೆ ಸಂಭವಿಸಿದ್ದು, ವಿಮಾನದಲ್ಲಿದ್ದ ಯಾರೂ ಬದುಕುಳಿದಿಲ್
Congo Plane Crash Kills 14 Including Two Senior Military Officers


ಕಿನ್ಶಾಸಾ, 26 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:

ಆಫ್ರಿಕಾದ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋದಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಇಬ್ಬರು ಹಿರಿಯ ಸೇನಾಧಿಕಾರಿಗಳು ಸೇರಿದಂತೆ 14 ಮಂದಿ ಮೃತಪಟ್ಟಿದ್ದಾರೆ.

ಶುಕ್ರವಾರ ಈ ದುರ್ಘಟನೆ ಸಂಭವಿಸಿದ್ದು, ವಿಮಾನದಲ್ಲಿದ್ದ ಯಾರೂ ಬದುಕುಳಿದಿಲ್ಲ ಎಂದು ಕಾಂಗೋ ಸೇನೆ ತಿಳಿಸಿದೆ.

ದಕ್ಷಿಣ–ಪಶ್ಚಿಮ ಕಾಂಗೋದ ಕಿಕ್ವಿಟ್ನಿಂದ ರಾಜಧಾನಿ ಕಿನ್ಶಾಸಾಗೆ ವಾಪಸಾಗುತ್ತಿದ್ದ ವಿಮಾನವು ತಾಂತ್ರಿಕ ದೋಷಕ್ಕೆ ಒಳಗಾದ ಹಿನ್ನೆಲೆಯಲ್ಲಿ ಕೆಂಗೆ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ.

ವಿಮಾನದಲ್ಲಿ ಸೇನಾ ನಿಯೋಗದ ಸದಸ್ಯರು ಹಾಗೂ ಸಿಬ್ಬಂದಿ ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತದಲ್ಲಿ ಕಾಂಗೋದ ಸೇನಾ ನ್ಯಾಯಾಲಯದ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಮುತೊಂಬೊ ಕಟಲಾಯಿ ಟಿಯೆಂಡೆ ಹಾಗೂ ಸಶಸ್ತ್ರ ಪಡೆಗಳ ಆಡಿಟರ್ ಜನರಲ್ ಲೆಫ್ಟಿನೆಂಟ್ ಜನರಲ್ ಬಕುಮಿ ಲಿಕುಲಿಯಾ ಮೃತಪಟ್ಟಿದ್ದಾರೆ. ಇವರಿಬ್ಬರೂ ಸೇನೆಯ ಪ್ರಮುಖ ಹುದ್ದೆಗಳನ್ನು ನಿರ್ವಹಿಸುತ್ತಿದ್ದರು.

ಈ ಕುರಿತು ಕಾಂಗೋ ಸೇನೆಯ ವಕ್ತಾರ ಮೇಜರ್ ಜನರಲ್ ಎಫೋಮಿ ಎಕೆಂಗೆ ಹೇಳಿಕೆ ನೀಡಿದ್ದು, “ಇಬ್ಬರು ಜನರಲ್ ಅಧಿಕಾರಿಗಳು ಸೇರಿದಂತೆ ನಿಯೋಗದ ಸದಸ್ಯರು ಹಾಗೂ ವಿಮಾನ ಸಿಬ್ಬಂದಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ” ಎಂದು ತಿಳಿಸಿದ್ದಾರೆ. ಅಪಘಾತದ ನಿಖರ ಕಾರಣ ಪತ್ತೆಹಚ್ಚಲು ತನಿಖೆ ಆರಂಭಿಸಲಾಗಿದೆ ಎಂದೂ ಅವರು ಹೇಳಿದ್ದಾರೆ.

ಸಿವಿಲ್ ಏವಿಯೇಷನ್ ಪ್ರಾಧಿಕಾರದ ಮಂಡಳಿ ಅಧ್ಯಕ್ಷ ಟ್ರೈಫೋನ್ ಕಿನ್-ಕೀ ಮುಲುಂಬಾ ಕೂಡ ಅಪಘಾತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ ಎಂದು ತಿಳಿಸಿದ್ದಾರೆ. ವಿಮಾನದ ತಾಂತ್ರಿಕ ಸ್ಥಿತಿ ಸೇರಿದಂತೆ ವಿವಿಧ ಅಂಶಗಳ ಕುರಿತು ತನಿಖೆ ನಡೆಯುತ್ತಿದೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande