ಮನಮೋಹನ್ ಸಿಂಗ್ ಅವರ ಜನ್ಮದಿನ: ಸಿದ್ದರಾಮಯ್ಯ, ಡಿಕೆಶಿ, ಹರಿಪ್ರಸಾದ್ ಗೌರವ ನಮನ
ಬೆಂಗಳೂರು, 26 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಮಾಜಿ ಪ್ರಧಾನಿ ಹಾಗೂ ಖ್ಯಾತ ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರ ಜನ್ಮದಿನದ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಎಕ್ಸನಲ್ಲಿ ಅವರನ್ನು ಸ್ಮರಿಸಿ ಗೌರ
ಸಿದ್ದರಾಮಯ್ಯ ಎಕ್ಸ್ ಪೋಸ್ಟ್


ಬೆಂಗಳೂರು, 26 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಮಾಜಿ ಪ್ರಧಾನಿ ಹಾಗೂ ಖ್ಯಾತ ಆರ್ಥಿಕ ತಜ್ಞ ಡಾ. ಮನಮೋಹನ್ ಸಿಂಗ್ ಅವರ ಜನ್ಮದಿನದ ಅಂಗವಾಗಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು ಎಕ್ಸನಲ್ಲಿ ಅವರನ್ನು ಸ್ಮರಿಸಿ ಗೌರವ ನಮನ ಸಲ್ಲಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಭಾರತದ ಆರ್ಥಿಕತೆಯನ್ನು ಹೊಸ ದಿಕ್ಕಿನತ್ತ ಕೊಂಡೊಯ್ದ ಮಹಾನ್ ಆರ್ಥಿಕ ತಜ್ಞ ಹಾಗೂ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರನ್ನು ಗೌರವಪೂರ್ವಕವಾಗಿ ಸ್ಮರಿಸುವುದಾಗಿ ತಿಳಿಸಿದ್ದಾರೆ.

ಆರ್ಥಿಕ ಸಂಕಷ್ಟದ ಸಂದರ್ಭದಲ್ಲಿ ದೂರದೃಷ್ಟಿಯ ಸುಧಾರಣೆಗಳ ಮೂಲಕ ದೇಶದ ಆರ್ಥಿಕತೆಗೆ ಭದ್ರ ಬುನಾದಿ ಹಾಕಿದ ಮನಮೋಹನ್ ಸಿಂಗ್ ಅವರು, ಪ್ರಧಾನಿಯಾಗಿ ಆರ್ಥಿಕ ಬೆಳವಣಿಗೆಯ ಜೊತೆಗೆ ಸಾಮಾಜಿಕ ನ್ಯಾಯಕ್ಕೂ ಆದ್ಯತೆ ನೀಡಿದ ಮುತ್ಸದ್ದಿ ನಾಯಕರು ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮಾಹಿತಿ ಹಕ್ಕು, ಶಿಕ್ಷಣದ ಹಕ್ಕು ಹಾಗೂ ಆಹಾರ ಭದ್ರತೆಯಂತಹ ಮಹತ್ವದ ಕ್ರಮಗಳು ಬಡವರು ಮತ್ತು ಮಧ್ಯಮ ವರ್ಗದವರ ಬದುಕಿನಲ್ಲಿ ಬದಲಾವಣೆಗೆ ದಾರಿ ಮಾಡಿಕೊಟ್ಟವು ಎಂದು ತಿಳಿಸಿದ್ದಾರೆ.

ಅಪಾರ ಜ್ಞಾನ, ಸರಳತೆ, ಸಂಯಮ ಮತ್ತು ಸೌಜನ್ಯದ ಪ್ರತೀಕವಾಗಿದ್ದ ಅವರ ವ್ಯಕ್ತಿತ್ವ ಸಾರ್ವಜನಿಕ ಜೀವನಕ್ಕೆ ಸದಾ ಮಾದರಿಯಾಗಿದೆ. ಅವರ ಜೀವನ ಮತ್ತು ಸಾಧನೆಗಳನ್ನು ಸ್ಮರಿಸಿ ಗೌರವಪೂರ್ವಕವಾಗಿ ನಮಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಭಾರತದ ಆರ್ಥಿಕತೆಯ ದಿಕ್ಕನ್ನೇ ಬದಲಿಸಿದ ಅಪ್ರತಿಮ ಆರ್ಥಿಕ ತಜ್ಞ ಹಾಗೂ ಸರಳತೆ, ಸಜ್ಜನಿಕೆ ಮತ್ತು ಪಾಂಡಿತ್ಯದಿಂದ ಸಾರ್ವಜನಿಕ ಬದುಕಿಗೆ ಘನತೆ ತಂದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರನ್ನು ಜನ್ಮದಿನದಂದು ಗೌರವಪೂರ್ವಕವಾಗಿ ಸ್ಮರಿಸಿದ್ದಾರೆ.

ದೇಶದ ಆರ್ಥಿಕ ಬೆಳವಣಿಗೆಗೆ ಬಲವಾದ ಅಡಿಪಾಯ ಹಾಕುವುದರ ಜೊತೆಗೆ ಶಿಕ್ಷಣದ ಹಕ್ಕು, ಮಾಹಿತಿ ಹಕ್ಕು, ಉದ್ಯೋಗ ಖಾತ್ರಿ ಹಾಗೂ ಆಹಾರ ಭದ್ರತೆಯಂತಹ ಜನಪರ ಹಕ್ಕುಗಳಿಗೆ ಕಾನೂನಿನ ಬಲ ನೀಡಿದ ಅವರ ನಾಯಕತ್ವ ಭಾರತದ ಅಭಿವೃದ್ಧಿಯ ಪಯಣದಲ್ಲಿ ಮಹತ್ವದ ಅಧ್ಯಾಯವಾಗಿದೆ ಎಂದು ಶಿವಕುಮಾರ್ ಹೇಳಿದ್ದಾರೆ.

ಡಾ. ಮನಮೋಹನ್ ಸಿಂಗ್ ಅವರು ಬೆಂಗಳೂರು ಹಾಗೂ ಕರ್ನಾಟಕಕ್ಕೆ ನೀಡಿದ ಕೊಡುಗೆಯನ್ನೂ ಶಿವಕುಮಾರ್ ಸ್ಮರಿಸಿದ್ದಾರೆ. ಬೆಂಗಳೂರು ಮೆಟ್ರೊಗೆ ಶಂಕುಸ್ಥಾಪನೆ ನೆರವೇರಿಸುವ ಸಂದರ್ಭದಲ್ಲಿ ಕರ್ನಾಟಕದ ಪ್ರಗತಿಯೊಂದಿಗೆ ಬೆಂಗಳೂರಿನ ಅಭಿವೃದ್ಧಿಗೂ ಒಟ್ಟಾಗಿ ಶ್ರಮಿಸುವ ಅಗತ್ಯವನ್ನು ಅವರು ಪ್ರತಿಪಾದಿಸಿದ್ದರು. ಬೆಂಗಳೂರು ಮತ್ತು ಕರ್ನಾಟಕದ ಅಭಿವೃದ್ಧಿ ಪರಸ್ಪರ ಅವಿನಾಭಾವವಾಗಿ ಬೆಸೆದುಕೊಂಡಿವೆ ಎಂಬುದನ್ನು ಅವರು ಗುರುತಿಸಿದ್ದರು ಎಂದು ಶಿವಕುಮಾರ್ ಹೇಳಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರು, ಭಾರತದ ಆರ್ಥಿಕತೆಯ ದಿಕ್ಕನ್ನೇ ಬದಲಿಸಿದ ಅಪ್ರತಿಮ ಆರ್ಥಿಕ ತಜ್ಞ, ಸರಳತೆ, ಸಜ್ಜನಿಕೆ ಹಾಗೂ ಪಾಂಡಿತ್ಯದಿಂದ ಸಾರ್ವಜನಿಕ ಬದುಕಿಗೆ ಘನತೆ ತಂದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರನ್ನು ಗೌರವಪೂರ್ವಕವಾಗಿ ಸ್ಮರಿಸಿದ್ದಾರೆ.

ಆರ್ಥಿಕ ಬೆಳವಣಿಗೆಗೆ ಬಲವಾದ ಅಡಿಪಾಯ ಹಾಕುವುದರ ಜೊತೆಗೆ ಶಿಕ್ಷಣದ ಹಕ್ಕು, ಮಾಹಿತಿ ಹಕ್ಕು, ಉದ್ಯೋಗ ಖಾತ್ರಿ ಮತ್ತು ಆಹಾರ ಭದ್ರತೆಯಂತಹ ಜನಪರ ಹಕ್ಕುಗಳಿಗೆ ಕಾನೂನಿನ ಬಲ ನೀಡಿದ ಅವರ ನಾಯಕತ್ವ ದೇಶದ ಅಭಿವೃದ್ಧಿಯ ಪಯಣದಲ್ಲಿ ಮಹತ್ವದ ಅಧ್ಯಾಯವಾಗಿದೆ ಎಂದು ಹರಿಪ್ರಸಾದ್ ಹೇಳಿದ್ದಾರೆ.

ಮಾತಿಗಿಂತ ಕೆಲಸಕ್ಕೆ, ಪ್ರಚಾರಕ್ಕಿಂತ ಫಲಿತಾಂಶಕ್ಕೆ ಆದ್ಯತೆ ನೀಡಿದ ಡಾ. ಮನಮೋಹನ್ ಸಿಂಗ್ ಅವರ ಸರಳ ವ್ಯಕ್ತಿತ್ವ, ದೂರದೃಷ್ಟಿ ಮತ್ತು ರಾಷ್ಟ್ರಸೇವೆ ಸದಾ ಸ್ಮರಣೀಯ ಎಂದು ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande