ಹಾಲಿನ ದರ ಏರಿಕೆ: ಸಂಪುಟದಲ್ಲಿ ಚರ್ಚಿಸಿ ತೀರ್ಮಾನ:ಡಿ.ಕೆ. ಶಿವಕುಮಾರ್
ಬೆಂಗಳೂರು, 26 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಹಾಲಿನ ದರ ಹೆಚ್ಚಳದ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಫ್ರೀಡಂ ಪಾರ್ಕ್ ಬಳಿ ಶನಿವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಹಾಲಿನ ದರ ಹೆ
ಮಾಧ್ಯಮಗಳಿಗೆ ಮಾತನಾಡಿದ ಮುಖ್ಯಮಂತ್ರಿ


ಬೆಂಗಳೂರು, 26 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:

ಹಾಲಿನ ದರ ಹೆಚ್ಚಳದ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಫ್ರೀಡಂ ಪಾರ್ಕ್ ಬಳಿ ಶನಿವಾರ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು, ಹಾಲಿನ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ತಮ್ಮನ್ನು ಭೇಟಿ ಮಾಡಿ, ಪ್ರತಿ ಲೀಟರ್‌ಗೆ 12 ರೂಪಾಯಿ ಹೆಚ್ಚಳ ಮಾಡುವಂತೆ ಮನವಿ ಮಾಡಿದ್ದಾರೆ. ಈ ಪೈಕಿ 2 ರೂಪಾಯಿಯನ್ನು ಸಂಘಗಳಿಗೆ ನೀಡುವಂತೆ ಕೋರಿದ್ದಾರೆ ಎಂದು ಹೇಳಿದರು.

ನೆರೆಯ ರಾಜ್ಯಗಳಾದ ತೆಲಂಗಾಣ, ತಮಿಳುನಾಡು ಹಾಗೂ ಆಂಧ್ರಪ್ರದೇಶಗಳಲ್ಲಿನ ಹಾಲಿನ ದರ ಮತ್ತು ಪರಿಸ್ಥಿತಿಗೆ ಸಂಬಂಧಿಸಿದ ವರದಿಗಳನ್ನು ಪಡೆದು ಪರಿಶೀಲಿಸಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಪ್ರಸ್ತುತ ಹಾಲಿನ ದರದಿಂದ ಹಾಲು ಉತ್ಪಾದಕರ ಸಂಘಗಳಿಗೆ ನಷ್ಟವಾಗುತ್ತಿದೆ. ಬೆಲೆ ವಿಚಾರದಲ್ಲಿ ರೈತರಲ್ಲಿ ಆಕ್ರೋಶವಿದ್ದು, 50 ಸಾವಿರ ಹಾಲು ಉತ್ಪಾದಕರು ಹಾಲಿನ ದರ ಹೆಚ್ಚಳಕ್ಕೆ ಆಗ್ರಹಿಸಿದ್ದಾರೆ ಎಂದು ಶಿವಕುಮಾರ್ ಹೇಳಿದರು.

ರೈತರು ಹಾಗೂ ಹಾಲು ಒಕ್ಕೂಟಗಳನ್ನು ರಕ್ಷಿಸಲು ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande