
ನವದೆಹಲಿ, 26 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ವಜಾ ಕ್ರಮಕ್ಕೆ ಆಗ್ರಹಿಸಿ ಪ್ರತಿಪಕ್ಷಗಳು ನಡೆಸುತ್ತಿರುವ ಹೋರಾಟಕ್ಕೆ ಕಾನೂನು ವಿಚಾರದಲ್ಲಿ ಹಿನ್ನಡೆಯಾಗುವ ಸಾಧ್ಯತೆ ಎದುರಾಗಿದೆ.
ಮಾಜಿ ಅಟಾರ್ನಿ ಜನರಲ್ ಮುಕುಲ್ ರೋಹ್ಟಗಿ ಅವರು ಪ್ರತಿಪಕ್ಷಗಳ ಆರೋಪಗಳಿಗೆ ಸಾಂವಿಧಾನಿಕ ಆಧಾರವಿಲ್ಲ ಎಂದು ಹೇಳಿದ್ದಾರೆ.
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ವಿಚಾರದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಪ್ರತಿಪಕ್ಷಗಳು, ಗ್ಯಾನೇಶ್ ಕುಮಾರ್ ವಿರುದ್ಧ ಸಂಸತ್ತಿನಲ್ಲಿ ವಜಾ ಪ್ರಕ್ರಿಯೆ ಆರಂಭಿಸಲು ಮುಂದಾಗಿವೆ. ಈ ಹಿನ್ನೆಲೆಯಲ್ಲಿ ಮುಕುಲ್ ರೋಹ್ಟಗಿ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.
ಭಿನ್ನಾಭಿಪ್ರಾಯವೊಂದೇ ವಜಾಕ್ಕೆ ಆಧಾರವಲ್ಲಚುನಾವಣಾ ಆಯೋಗದ ಮೂವರು ಸದಸ್ಯರ ನಡುವೆ ಯಾವುದೇ ವಿಚಾರದಲ್ಲಿ ಭಿನ್ನಾಭಿಪ್ರಾಯ ಮೂಡುವುದು ಸಹಜ. ಅದನ್ನು ಆಧಾರವಾಗಿಟ್ಟುಕೊಂಡು ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಲು ಸಾಧ್ಯವಿಲ್ಲ ಎಂದು ರೋಹ್ಟಗಿ ಹೇಳಿದ್ದಾರೆ.
ಅವರ ಪ್ರಕಾರ, ಪ್ರತಿಪಕ್ಷಗಳು ಮಾಡಿರುವ ಆರೋಪಗಳಲ್ಲಿ ಹಲವು ಅಸ್ಪಷ್ಟತೆಗಳಿದ್ದು, ಅವುಗಳಿಗೆ ಸಾಂವಿಧಾನಿಕ ಆಧಾರವಿಲ್ಲ.ಚುನಾವಣಾ ಆಯುಕ್ತರಾದ ಸುಖ್ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಷಿ ಅವರು ಮತದಾರರ ಪಟ್ಟಿ ಪರಿಷ್ಕರಣೆ ಸೇರಿದಂತೆ ಕೆಲವು ವಿಚಾರಗಳಲ್ಲಿ ಆಡಳಿತಾತ್ಮಕ ಟಿಪ್ಪಣಿಗಳನ್ನು ದಾಖಲಿಸಿರುವುದನ್ನೂ ರೋಹ್ಟಗಿ ಉಲ್ಲೇಖಿಸಿದ್ದಾರೆ. ಆದರೆ, ಆಯೋಗದೊಳಗಿನ ಭಿನ್ನಾಭಿಪ್ರಾಯವು ಅಂತಿಮ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯ ಭಾಗವಾಗಿರಬಹುದು ಎಂದು ಅವರು ಹೇಳಿದ್ದಾರೆ.
ರಾಹುಲ್ ಗಾಂಧಿ ಆರೋಪಕ್ಕೂ ಪ್ರತಿಕ್ರಿಯೆರಾಹುಲ್ ಗಾಂಧಿ ಸೇರಿದಂತೆ ಪ್ರತಿಪಕ್ಷ ನಾಯಕರು ಜ್ಞಾನೇಶ್ ಕುಮಾರ್ ವಿರುದ್ಧ ಆರೋಪ ಮಾಡಿರುವ ಕುರಿತು ಪ್ರತಿಕ್ರಿಯಿಸಿದ ರೋಹ್ಟಗಿ, ರಾಜಕೀಯ ನಾಯಕರು ಆರೋಪಗಳನ್ನು ಮಾಡುವ ಹಕ್ಕು ಹೊಂದಿದ್ದಾರೆ. ಆದರೆ, ಆರೋಪಗಳಿಗೆ ಕಾನೂನುಬದ್ಧ ಆಧಾರ ಇರಬೇಕು ಎಂದು ಹೇಳಿದ್ದಾರೆ.
ಸಂವಿಧಾನದ 324(5)ನೇ ವಿಧಿಯ ಪ್ರಕಾರ ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸುವ ಪ್ರಕ್ರಿಯೆಗೆ ಸಂಸತ್ತಿನ ಎರಡೂ ಸದನಗಳಲ್ಲಿ ಅಗತ್ಯವಿರುವ ವಿಶೇಷ ಬಹುಮತದ ಬೆಂಬಲ ಬೇಕಾಗುತ್ತದೆ ಎಂದು ರೋಹ್ಟಗಿ ವಿವರಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R