ಕೊಣ್ಣೂರು ಗ್ರಾಮದ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಡಳಿತದ ಸ್ಪಂದನೆಗೆ ಮೆಚ್ಚುಗೆ
ಬಾಗಲಕೋಟೆ, 26 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಕೊಣ್ಣೂರು ಗ್ರಾಮದ ಹೋರಾಟಗಾರರು ಹಾಗೂ ಸ್ಥಳೀಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿ, ಅವುಗಳ ನಿವಾರಣೆಗೆ ಅಗತ್ಯ ಕ್ರಮ ಕೈಗೊಂಡಿರುವ ಬಾಗಲಕೋಟೆ ಜಿಲ್ಲಾಡಳಿತಕ್ಕೆ ಬಿಜೆಪಿ ಉಚ್ಛಾಟಿತ ನಾಯಕ ವೀರಣ್ಣ ಹಳೇಗೌಡರ ಅಭಿನಂದನೆ ಸಲ್ಲಿ
ಅಭಿನಂದನೆ


ಬಾಗಲಕೋಟೆ, 26 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಕೊಣ್ಣೂರು ಗ್ರಾಮದ ಹೋರಾಟಗಾರರು ಹಾಗೂ ಸ್ಥಳೀಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಆಲಿಸಿ, ಅವುಗಳ ನಿವಾರಣೆಗೆ ಅಗತ್ಯ ಕ್ರಮ ಕೈಗೊಂಡಿರುವ ಬಾಗಲಕೋಟೆ ಜಿಲ್ಲಾಡಳಿತಕ್ಕೆ ಬಿಜೆಪಿ ಉಚ್ಛಾಟಿತ ನಾಯಕ ವೀರಣ್ಣ ಹಳೇಗೌಡರ ಅಭಿನಂದನೆ ಸಲ್ಲಿಸಿದರು.

ನಗರದ ಕಾನಿಪ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊಣ್ಣೂರು ಗ್ರಾಮದ ಹೋರಾಟಗಾರರು ತಮ್ಮ ವಿವಿಧ ಬೇಡಿಕೆಗಳು ಹಾಗೂ ಸಮಸ್ಯೆಗಳ ಕುರಿತು ಜಿಲ್ಲಾಡಳಿತದ ಗಮನಕ್ಕೆ ತಂದಿದ್ದರು.

ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಿ, ಅವುಗಳನ್ನು ಪರಿಶೀಲಿಸಿ ಪರಿಹಾರದ ನಿಟ್ಟಿನಲ್ಲಿ ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ಹೇಳಿದರು.

ಗ್ರಾಮೀಣ ಭಾಗದ ಜನರು ತಮ್ಮ ಸಮಸ್ಯೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದಾಗ, ಅವುಗಳನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ರೀತಿಯಲ್ಲಿ ಸ್ಪಂದಿಸುವುದು ಆಡಳಿತದ ಜವಾಬ್ದಾರಿಯಾಗಿದೆ. ಕೊಣ್ಣೂರು ಗ್ರಾಮದ ಹೋರಾಟಗಾರರ ಸಮಸ್ಯೆಗಳ ಕುರಿತು ಜಿಲ್ಲಾಡಳಿತ ಗಮನಹರಿಸಿ ಪರಿಹಾರ ಕ್ರಮಕ್ಕೆ ಮುಂದಾಗಿರುವುದು ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವಂತಿದೆ ಎಂದು ಹಳೇಗೌಡರ ತಿಳಿಸಿದರು.

ಜನರ ಸಮಸ್ಯೆಗಳನ್ನು ಆಲಿಸಿ, ಸಂಬಂಧಿಸಿದ ಅಧಿಕಾರಿಗಳ ಮೂಲಕ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುತ್ತಿರುವ ಜಿಲ್ಲಾಡಳಿತದ ಕಾರ್ಯವೈಖರಿಯನ್ನು ಅವರು ಇದೇ ವೇಳೆ ಶ್ಲಾಘಿಸಿದರು. ಮುಂದಿನ ದಿನಗಳಲ್ಲಿಯೂ ಜಿಲ್ಲೆಯ ವಿವಿಧ ಭಾಗಗಳ ಸಾರ್ವಜನಿಕ ಸಮಸ್ಯೆಗಳಿಗೆ ಇದೇ ರೀತಿಯ ಸ್ಪಂದನೆ ದೊರೆಯಬೇಕು ಎಂದು ಅವರು ಆಶಿಸಿದರು.

ಸಾರ್ವಜನಿಕರ ಬೇಡಿಕೆಗಳು ಮತ್ತು ಹೋರಾಟಗಳನ್ನು ಆಡಳಿತ ವ್ಯವಸ್ಥೆ ಮುಕ್ತ ಮನಸ್ಸಿನಿಂದ ಆಲಿಸಿ, ಕಾನೂನು ಮತ್ತು ನಿಯಮಗಳ ವ್ಯಾಪ್ತಿಯಲ್ಲಿ ಪರಿಹಾರ ಕಂಡುಕೊಳ್ಳುವ ಮೂಲಕ ಜನಪರ ಆಡಳಿತಕ್ಕೆ ಆದ್ಯತೆ ನೀಡಬೇಕು ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಹನಮಂತಗೌಡ ಹಳೇಗೌಡರ, ಮಲ್ಲು ಹುನಗುಂಡಿ, ಗದಿಗೆಪ್ಪ ಧಾರವಾಡ, ಕೋನಪ್ಪ ಆಡಗಲ್ಲ ಹಾಗೂ ಬಾಳು ಗಡದವರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande