
ನವದೆಹಲಿ, 26 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ನಿಂದ ನಿವೃತ್ತಿ ಘೋಷಿಸಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳಲ್ಲಿ ಚರ್ಚೆಗೆ ಕಾರಣವಾಗಿದೆ.
ಆದರೆ ಈ ಬಗ್ಗೆ ಬಿಸಿಸಿಐ ಅಥವಾ ವಿರಾಟ್ ಕೊಹ್ಲಿ ಅವರಿಂದ ಅಧಿಕೃತ ನಿವೃತ್ತಿ ಘೋಷಣೆ ಸದ್ಯಕ್ಕೆ ಲಭ್ಯವಾಗಿಲ್ಲ.ಇದಕ್ಕೆ ವಿರುದ್ಧವಾಗಿ, ಬಿಸಿಸಿಐ ಸೆಪ್ಟೆಂಬರ್ 16ರಂದು ಪ್ರಕಟಿಸಿದ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ ಅವರ ಹೆಸರನ್ನು ಸೇರ್ಪಡೆಗೊಳಿಸಿದೆ.
ಸರಣಿಯ ಮೊದಲ ಪಂದ್ಯ ಸೆಪ್ಟೆಂಬರ್ 27ರಂದು ತಿರುವನಂತಪುರದಲ್ಲಿ ನಡೆಯಲಿದೆ.ಈ ಕುರಿತು ಭಾರತ ತಂಡದ ಬೌಲಿಂಗ್ ಕೋಚ್ ಮೊರ್ನೆ ಮೊರ್ಕೆಲ್ ಮಾತನಾಡಿ, ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಅನುಭವ ತಂಡಕ್ಕೆ ಬಹಳ ಮಹತ್ವದ್ದಾಗಿದೆ ಎಂದು ಹೇಳಿದ್ದಾರೆ.
“ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರ ಅನುಭವ ತಂಡಕ್ಕೆ ದೊರೆಯುತ್ತಿರುವುದು ನಮ್ಮ ಅದೃಷ್ಟ. ಅವರ ಮಾರ್ಗದರ್ಶನ ಮತ್ತು ಆಟದ ಅನುಭವ ನಾಯಕ ಶುಭಮನ್ ಗಿಲ್ ಸೇರಿದಂತೆ ಯುವ ಆಟಗಾರರಿಗೆ ಬಹಳ ಸಹಕಾರಿಯಾಗಲಿದೆ,” ಎಂದು ಮೊರ್ನೆ ಮೊರ್ಕೆಲ್ ಹೇಳಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R