ಇಂದೂ ಬ್ಯಾಂಕ್ ಗಳು ಕಾರ್ಯನಿರ್ವಣೆ; ಅಗತ್ಯ ವಹಿವಾಟು ಪೂರ್ಣಗೊಳಿಸಲು ಗ್ರಾಹಕರಿಗೆ ಸಲಹೆ
ನವದೆಹಲಿ, 27 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್:ಬ್ಯಾಂಕ್ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಅಗತ್ಯ ವಹಿವಾಟುಗಳಿಗೆ ತೊಂದರೆಯಾಗದಂತೆ ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಹಾಗೂ ಹಳೆಯ ಖಾಸಗಿ ಬ್ಯಾಂಕ್‌ಗಳ ಶಾಖೆಗಳನ್ನು ಭಾನುವಾರ ತೆರೆಯುವಂತೆ ಸರ್ಕಾರ ಸೂಚಿಸಿದೆ. ಮುಷ್ಕರ ಆರಂಭಕ್ಕೂ ಮುನ್ನ ಅಗತ್ಯ ಬ್ಯಾಂಕಿಂ
सांकेतिक।


ನವದೆಹಲಿ, 27 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:ಬ್ಯಾಂಕ್ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಅಗತ್ಯ ವಹಿವಾಟುಗಳಿಗೆ ತೊಂದರೆಯಾಗದಂತೆ ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಹಾಗೂ ಹಳೆಯ ಖಾಸಗಿ ಬ್ಯಾಂಕ್‌ಗಳ ಶಾಖೆಗಳನ್ನು ಭಾನುವಾರ ತೆರೆಯುವಂತೆ ಸರ್ಕಾರ ಸೂಚಿಸಿದೆ. ಮುಷ್ಕರ ಆರಂಭಕ್ಕೂ ಮುನ್ನ ಅಗತ್ಯ ಬ್ಯಾಂಕಿಂಗ್ ವಹಿವಾಟುಗಳನ್ನು ಪೂರ್ಣಗೊಳಿಸುವಂತೆ ಗ್ರಾಹಕರಿಗೆ ಸಲಹೆ ನೀಡಲಾಗಿದೆ.

ಬ್ಯಾಂಕ್ ನೌಕರರ ಸಂಘಟನೆಗಳು ಸೆಪ್ಟೆಂಬರ್ 28ರಿಂದ ಮೂರು ದಿನಗಳ ದೇಶವ್ಯಾಪಿ ಮುಷ್ಕರಕ್ಕೆ ಕರೆ ನೀಡಿವೆ. ಇದರಿಂದ ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ದೇಶದ ಸುಮಾರು ಶೇ.90ರಷ್ಟು ಬ್ಯಾಂಕ್ ನೌಕರರನ್ನು ಪ್ರತಿನಿಧಿಸುವುದಾಗಿ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ತಿಳಿಸಿದೆ.

ಐದು ದಿನಗಳ ಬ್ಯಾಂಕಿಂಗ್ ವಾರ ಜಾರಿ, ಪಿಂಚಣಿ ಸುಧಾರಣೆ ಸೇರಿದಂತೆ ನೌಕರರ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಂಘಟನೆಗಳು ಮುಷ್ಕರ ನಡೆಸುತ್ತಿವೆ.

ಭಾರತೀಯ ಸ್ಟೇಟ್ ಬ್ಯಾಂಕ್ ತನ್ನ ಗ್ರಾಹಕರು ಪ್ರಮುಖ ವಹಿವಾಟುಗಳನ್ನು ಮುಂಚಿತವಾಗಿ ಪೂರ್ಣಗೊಳಿಸುವಂತೆ ಸಲಹೆ ನೀಡಿದ್ದು, ಯೋನೋ, ಅಂತರ್ಜಾಲ ಬ್ಯಾಂಕಿಂಗ್, ಮೊಬೈಲ್ ಬ್ಯಾಂಕಿಂಗ್, ಯುಪಿಐ, ಎಟಿಎಂ ಹಾಗೂ ನಗದು ಠೇವಣಿ ಯಂತ್ರಗಳಂತಹ ಡಿಜಿಟಲ್ ಸೇವೆಗಳನ್ನು ಬಳಸುವಂತೆ ಸೂಚಿಸಿದೆ.

ಬ್ಯಾಂಕ್ ಆಫ್ ಇಂಡಿಯಾ ಕೂಡ ಡಿಜಿಟಲ್ ಸೇವೆಗಳು ಹಾಗೂ 24 ಗಂಟೆ ಲಭ್ಯವಿರುವ ವೇದಿಕೆಗಳನ್ನು ಬಳಸುವಂತೆ ಗ್ರಾಹಕರಿಗೆ ತಿಳಿಸಿದೆ. ಐಸಿಐಸಿಐ ಬ್ಯಾಂಕ್, ಎಚ್‌ಡಿಎಫ್‌ಸಿ ಬ್ಯಾಂಕ್, ಆಕ್ಸಿಸ್ ಬ್ಯಾಂಕ್ ಹಾಗೂ ಇಂಡಸ್‌ಇಂಡ್ ಬ್ಯಾಂಕ್‌ನಂತಹ ಹೊಸ ಖಾಸಗಿ ಬ್ಯಾಂಕ್‌ಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸುವ ಸಾಧ್ಯತೆ ಇದೆ.

ಮುಷ್ಕರಕ್ಕೆ ಸಂಬಂಧಿಸಿದ ಬಾಕಿ ಉಳಿದಿರುವ ವಿಷಯಗಳನ್ನು ಮಾತುಕತೆ ಮೂಲಕ ಪರಿಹರಿಸುವಂತೆ ಹಣಕಾಸು ಸಚಿವಾಲಯವು ಬ್ಯಾಂಕ್ ನೌಕರರ ಸಂಘಟನೆಗಳಿಗೆ ಮನವಿ ಮಾಡಿದೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande