
ಬೆಂಗಳೂರು, 27 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್:
ರಾಜ್ಯದ ಪ್ರಮುಖ ಸಮಸ್ಯೆಗಳ ಕುರಿತು ಕೇಂದ್ರ ಸರ್ಕಾರದ ಗಮನ ಸೆಳೆಯಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೋಮವಾರ ದೆಹಲಿಗೆ ತೆರಳಲಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ರಾಜ್ಯದ ಸರ್ವಪಕ್ಷ ನಿಯೋಗಕ್ಕೆ ಸಮಯ ನೀಡುವಂತೆ ಮನವಿ ಮಾಡುವ ಸಾಧ್ಯತೆ ಇದೆ.
ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ವಿಚಾರಗಳಲ್ಲಿ ಕೇಂದ್ರದ ನೆರವು ಹಾಗೂ ಅಗತ್ಯ ಕ್ರಮಗಳ ಕುರಿತು ಚರ್ಚಿಸಲು ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದೊಯ್ಯುವ ಉದ್ದೇಶವನ್ನು ಡಿ.ಕೆ. ಶಿವಕುಮಾರ್ ಹೊಂದಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರ ಭೇಟಿಗೆ ಸಮಯ ಕೋರಲು ನಿರ್ಧರಿಸಲಾಗಿದೆ.ಈ ಹಿಂದೆ ಕೂಡ ರಾಜ್ಯದ ಸಮಸ್ಯೆಗಳ ಕುರಿತು ಸರ್ವಪಕ್ಷ ನಿಯೋಗದ ಮೂಲಕ ಕೇಂದ್ರದ ಗಮನ ಸೆಳೆಯುವ ಕುರಿತು ಡಿ.ಕೆ. ಶಿವಕುಮಾರ್ ಮಾತನಾಡಿದ್ದರು.
“ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ವಿಚಾರಗಳಲ್ಲಿ ಕೇಂದ್ರ ಸರ್ಕಾರದ ಸಹಕಾರ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಸರ್ವಪಕ್ಷ ನಿಯೋಗಕ್ಕೆ ಸಮಯ ನೀಡುವಂತೆ ಮನವಿ ಮಾಡಲಾಗುವುದು” ಎಂದು ಶಿವಕುಮಾರ್ ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R