
ಬೆಳಗಾವಿ, 27 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:
ಬೆಳಗಾವಿ ಜಿಲ್ಲಾ ಗ್ರಾಮೀಣ ಮಹಿಳಾ ಕಾಂಗ್ರೆಸ್ ವತಿಯಿಂದ ಘಟ್ಟಪ್ರಭಾದ ಡಾ. ಎನ್.ಎಸ್. ಹಾರ್ಡಿಕರ್ ಸೇವಾದಳ ಅಕಾಡೆಮಿಯಲ್ಲಿ ಆಯೋಜಿಸಲಾಗಿರುವ ಎರಡು ದಿನಗಳ ಮಹಿಳಾ ನಾಯಕತ್ವ ಕಾರ್ಯಾಗಾರವನ್ನು ಸಚಿವ ಸತೀಶ್ ಜಾರಕಿಹೊಳಿ ಉದ್ಘಾಟಿಸಿದರು.
ಮಹಿಳಾ ಸಬಲೀಕರಣ, ನಾಯಕತ್ವ ಗುಣಗಳ ಅಭಿವೃದ್ಧಿ ಹಾಗೂ ಸಾಮಾಜಿಕ ಮತ್ತು ರಾಜಕೀಯ ಕ್ಷೇತ್ರಗಳಲ್ಲಿ ಮಹಿಳೆಯರ ಸಕ್ರಿಯ ಪಾಲ್ಗೊಳ್ಳುವಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಕಾರ್ಯಾಗಾರ ಆಯೋಜಿಸಲಾಗಿದೆ.
ಮಹಿಳೆಯರು ನಾಯಕತ್ವದ ವಿವಿಧ ಹಂತಗಳಲ್ಲಿ ಮುಂಚೂಣಿಗೆ ಬಂದು, ಸಮಾಜದ ಪ್ರಗತಿಯಲ್ಲಿ ತಮ್ಮದೇ ಆದ ಮಹತ್ವದ ಪಾತ್ರ ವಹಿಸುವಂತಾಗಬೇಕು. ಈ ಆಶಯದೊಂದಿಗೆ ಆಯೋಜಿಸಿರುವ ಕಾರ್ಯಾಗಾರ ಅರ್ಥಪೂರ್ಣವಾಗಿ ನಡೆಯಲಿ ಎಂದು ಸತೀಶ್ ಜಾರಕಿಹೊಳಿ ಆಶಿಸಿದರು.
ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ಬಸವರಾಜ ಶೇಗುಣಶಿ, ಮಹಿಳಾ ಘಟಕದ ಅಧ್ಯಕ್ಷೆ ಅಶ್ವಿನಿ ಬೆಳವಡಿ ಸೇರಿದಂತೆ ಹಲವರು ಉಪಸ್ಥಿತರಿದ್ದರು
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.