ಆದೇಶ ಹೊರಡಿಸಿ, ನೇಮಕಾತಿ ಮಾಡದಿರುವುದೇಕೆ: ಆರ್. ಅಶೋಕ್ ಪ್ರಶ್ನೆ
ಬೆಂಗಳೂರು, 27 ಸೆಪ್ಟೆಂಬರ್ (ಹಿ.ಸ.): ಆ್ಯಂಕರ್: ಶೈಕ್ಷಣಿಕ ವರ್ಷ ಆರಂಭವಾಗಿ ಮೂರು ತಿಂಗಳು ಕಳೆದರೂ 5,068 ಅತಿಥಿ ಉಪನ್ಯಾಸಕರಿಗೆ ಭರವಸೆ ನೀಡಿದ್ದ ಶೈಕ್ಷಣಿಕ ಸಂಯೋಜಕರ ಹುದ್ದೆಗಳ ನೇಮಕಾತಿ ಇನ್ನೂ ನಡೆದಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ
ಅಶೋಕ ಸಂಗ್ರಹ ಚಿತ್ರ


ಬೆಂಗಳೂರು, 27 ಸೆಪ್ಟೆಂಬರ್ (ಹಿ.ಸ.):

ಆ್ಯಂಕರ್:

ಶೈಕ್ಷಣಿಕ ವರ್ಷ ಆರಂಭವಾಗಿ ಮೂರು ತಿಂಗಳು ಕಳೆದರೂ 5,068 ಅತಿಥಿ ಉಪನ್ಯಾಸಕರಿಗೆ ಭರವಸೆ ನೀಡಿದ್ದ ಶೈಕ್ಷಣಿಕ ಸಂಯೋಜಕರ ಹುದ್ದೆಗಳ ನೇಮಕಾತಿ ಇನ್ನೂ ನಡೆದಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಹೇಳಿಕೆ ನೀಡಿರುವ ಅವರು, ರಾಜ್ಯ ಸರ್ಕಾರ ಆದೇಶ ಹೊರಡಿಸಿ ತಿಂಗಳುಗಳು ಕಳೆದರೂ ನೇಮಕಾತಿ ಪ್ರಕ್ರಿಯೆ ವಿಳಂಬ ಮಾಡುತ್ತಿರುವುದು ಸರ್ಕಾರದ ನಿರ್ಲಕ್ಷ್ಯ ಧೋರಣೆಗೆ ಸಾಕ್ಷಿಯಾಗಿದೆ ಎಂದು ಟೀಕಿಸಿದ್ದಾರೆ.

ಸಾವಿರಾರು ಅತಿಥಿ ಉಪನ್ಯಾಸಕರು ಮತ್ತು ಅವರ ಕುಟುಂಬಗಳು ಸರ್ಕಾರದ ನಿರ್ಧಾರಕ್ಕಾಗಿ ಕಾಯುತ್ತಿವೆ. ಅವರ ಜೀವನ ಮತ್ತು ಭವಿಷ್ಯದೊಂದಿಗೆ ಸರ್ಕಾರ ಆಟವಾಡಬಾರದು ಎಂದು ಅಶೋಕ್ ಹೇಳಿದ್ದಾರೆ.

ಈ ವಿಚಾರದಲ್ಲಿ ರಾಜ್ಯ ಸರ್ಕಾರ ಮತ್ತಷ್ಟು ವಿಳಂಬ ಮಾಡದೆ ಸ್ಪಷ್ಟ ಹಾಗೂ ಅಂತಿಮ ನಿರ್ಧಾರ ಕೈಗೊಳ್ಳಬೇಕು. ಶೈಕ್ಷಣಿಕ ಸಂಯೋಜಕರ ನೇಮಕಾತಿ ಪ್ರಕ್ರಿಯೆಯನ್ನು ತಕ್ಷಣ ಪೂರ್ಣಗೊಳಿಸಿ ಅತಿಥಿ ಉಪನ್ಯಾಸಕರಿಗೆ ನ್ಯಾಯ ಒದಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅತಿಥಿ ಉಪನ್ಯಾಸಕರ ಬದುಕಿನ ಅನಿಶ್ಚಿತತೆಯನ್ನು ಹೆಚ್ಚಿಸುವ ನಿರ್ಲಕ್ಷ್ಯ ಧೋರಣೆ ಕೈಬಿಡಬೇಕು. ಅವರ ಜೀವನದೊಂದಿಗೆ ಆಟವಾಡುವುದನ್ನು ರಾಜ್ಯ ಸರ್ಕಾರ ಕೂಡಲೇ ನಿಲ್ಲಿಸಬೇಕು ಎಂದು ಅಶೋಕ್ ಒತ್ತಾಯಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande