
ಬಳ್ಳಾರಿ, 28 ಸೆಪ್ಟೆಂಬರ್ (ಹಿ.ಸ.)
ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಸಮಾಜ ಕಲ್ಯಾಣ ಇಲಾಖೆಯು 2026-27ನೇ ಸಾಲಿನ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಎಸ್.ಎಸ್.ಎಲ್.ಸಿ ಹಾಗೂ ಮೆಟ್ರಿಕ್ ನಂತರದ ಪ್ರೋತ್ಸಾಹಧನ ಮತ್ತು ವಸತಿನಿಲಯಗಳ ಪ್ರವೇಶಾವಕಾಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಈ ಸೌಲಭ್ಯಗಳಿಗಾಗಿ ವಿದ್ಯಾರ್ಥಿಗಳು ಎಚ್ಎಂಐಎಸ್ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಲು ಅನುಕೂಲವಾಗುವಂತೆ ಅಕ್ಟೋಬರ್ 01 ಜಿಲ್ಲೆ, ತಾಲೂಕು ಹಾಗೂ ಗ್ರಾಮ ಮಟ್ಟದಲ್ಲಿ ‘ವಿದ್ಯಾರ್ಥಿ ವೇತನ ಅಭಿಯಾನ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅರ್ಹ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್ಸೈಟ್ ಆದ www.sw.kar.nic.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಕೋಟೆ, ಬಳ್ಳಾರಿ-583101 (ದೂ: 9480843023). ಸಹಾಯಕ ನಿರ್ದೇಶಕರು (ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಕೌಲ್ ಬಜಾರ್ 1ನೇ ಗೇಟ್ ಹತ್ತಿರ, ಡಾ. ಬಿ.ಆರ್.ಅಂಬೇಡ್ಕರ್ ಭವನ, ಬಳ್ಳಾರಿ-583101 (ದೂ: 9480843073).
ಸಹಾಯಕ ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸಿಡಿಪಿಒ ಕಚೇರಿ ಹತ್ತಿರ, ಸಂಡೂರು-583119 (ದೂ: 9480843079).
ನಿರ್ದೇಶಕರು (ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ವಿನಾಯಕ ನಗರ, 15ನೇ ವಾರ್ಡ್, ಈಡಿಗರ ಶೀನಪ್ಪ ಲೇಔಟ್, ಸಿರುಗುಪ್ಪ-583121 (ದೂ: 9480843078).
ಅರ್ಹ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳು ಈ ಅಭಿಯಾನದ ಸದುಪಯೋಗ ಪಡೆದುಕೊಂಡು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್