ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ವರ ಕುಮಾರ್ ಬಂಧನಕ್ಕೆ ಕಾಂಗ್ರೆಸ್ ಆಗ್ರಹ
ಬಳ್ಳಾರಿ, 28 ಸೆಪ್ಟೆಂಬರ್ (ಹಿ.ಸ.): ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾದ ಜ್ಞಾನೇಶ್ವರ್ ಕುಮಾರ್ ಅವರನ್ನು ಬಂಧಿಸಲು ಆಗ್ರಹಿಸಿ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಸಮಿತಿಯು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ಪ್ರತಿಕೃತಿಯನ್ನು ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿತು. ಬಳ್ಳಾರಿ ನಗರ
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ವರ ಕುಮಾರ್ ಬಂಧನಕ್ಕೆ ಕಾಂಗ್ರೆಸ್ ಆಗ್ರಹ


ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ವರ ಕುಮಾರ್ ಬಂಧನಕ್ಕೆ ಕಾಂಗ್ರೆಸ್ ಆಗ್ರಹ


ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ವರ ಕುಮಾರ್ ಬಂಧನಕ್ಕೆ ಕಾಂಗ್ರೆಸ್ ಆಗ್ರಹ


ಬಳ್ಳಾರಿ, 28 ಸೆಪ್ಟೆಂಬರ್ (ಹಿ.ಸ.):

ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾದ ಜ್ಞಾನೇಶ್ವರ್ ಕುಮಾರ್ ಅವರನ್ನು ಬಂಧಿಸಲು ಆಗ್ರಹಿಸಿ ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಸಮಿತಿಯು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿ, ಕೇಂದ್ರ ಸರ್ಕಾರದ ಪ್ರತಿಕೃತಿಯನ್ನು ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿತು.

ಬಳ್ಳಾರಿ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿರುವ ಅಲ್ಲಂ ಪ್ರಶಾಂತ್ ಅವರು ಪ್ರತಿಭಟನೆಯ ನೇತೃತ್ವವಹಿಸಿ, ಎಸ್ಐಆರ್ ವಿಚಾರದಲ್ಲಿ

ಕೇಂದ್ರ ಚುನಾವಣಾ ಆಯೋಗದ ಕ್ರಮಗಳು ಖಂಡನೀಯ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತರಾದ ಜ್ಞಾನೇಶ್ವರ್ ಕುಮಾರ್ ಅವರನ್ನು ಬಂಧಿಸಿ, ವಿಚಾರಣೆಗೆ ಒಳಪಡಿಸಬೇಕು ಎಂದು ಅವರು ಆಗ್ರಹಿಸಿದರು.

ಎಸ್ಐಆರ್ ವಿಚಾರದಲ್ಲಿ ಚುನಾವಣಾ ಆಯೋಗದ ಆಯುಕ್ತರು ವಿಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿರುವುದು ಹಾಗೂ ಮುಖ್ಯ

ಆಯುಕ್ತ ಜ್ಞಾನೇಶ್ವರ್ ಕುಮಾರ್ ಅವರು ಏಕಪಕ್ಷೀಯವಾಗಿ ನಿರ್ಧಾರ ಕೈಗೊಳ್ಳುತ್ತಿರುವ ಕುರಿತು ಬಹಿರಂಗವಾಗಿದೆ. ಎಸ್ಐಆರ್ನಿಂದಾಗಿ ಮತದಾರರ ಮತದ ಹಕ್ಕು, ನಾಗರೀಕತೆಯ ಹಕ್ಕು ಹಾಗೂ ಪ್ರಜಾಪ್ರಭುತ್ವದ ಹಕ್ಕುಗಳು ನಾಶವಾಗುತ್ತಿವೆ ಎಂದು ಅವರು ಟೀಕಿಸಿದರು.

ಲಿಡ್ಕರ್ ಅಧ್ಯಕ್ಷ ಮುಂಡ್ರಿಗಿ ನಾಗರಾಜ್, ಕೆಪಿಸಿಸಿ ವಕ್ತಾರ ವೆಂಕಟೇಶ್ ಹೆಗಡೆ, ಬುಡಾ ಮಾಜಿ ಅಧ್ಯಕ್ಷ ಹುಮಾಯೂನ್ ಖಾನ್, ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಎ. ಮಾನಯ್ಯ, ಈರನಗೌಡ, ಬೋಯಪಾಟಿ ವಿಷ್ಣುವರ್ಧನ್, ಪಾಲಿಕೆ ಸದಸ್ಯರಾದ ಪೇರಂ ವಿವೇಕ್(ವಿಕ್ಕಿ), ಅಯಾಜ್

ಅಹಮದ್, ನಾಗಲಕೆರೆ ಗೋವಿಂದ, ಎಲ್. ಮಾರೆÀಣ್ಣ, ವೆಂಕಟೇಶ್, ಅಲ್ಲಾ ಬಕಾಶ್, ಶಾಮೀಮ್ ಜಕ್ಲಿ, ಪರ್ವೀನ್ ಬಾನು ಸೇರಿದಂತೆ ಜಿಲ್ಲಾ ಕಾಂಗ್ರೆಸ್ ಸಮಿತಿಯರ ಸದಸ್ಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande