ದೆಹಲಿ ವಾಯು ಮಾಲಿನ್ಯ ನಿಯಂತ್ರಣ ಕುರಿತು ಸಚಿವ ಭೂಪೇಂದ್ರ ಯಾದವ್ ಅಧ್ಯಕ್ಷತೆಯಲ್ಲಿ ಸಭೆ
ನವದೆಹಲಿ, ಸೆಪ್ಟೆಂಬರ್ 28: ದೆಹಲಿಯಲ್ಲಿ ವಾಯು ಮಾಲಿನ್ಯ ನಿಯಂತ್ರಣ ಕುರಿತು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಪರಿಸರ ಭವನದಲ್ಲಿ ಸಭೆ ನಡೆಯಿತು. ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಹಾಗೂ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ
पर्यावरण भवन में  सोमवार को केंद्रीय पर्यावरण, वन एवं जलवायु परिवर्तन मंत्री भूपेंद्र यादव की अध्यक्षता में बैठक  में शामिल  दिल्ली की मुख्यमंत्री रेखा गुप्ता और दिल्ली के पर्यावरण मंत्री मनजिंदर सिंह सिरसा शा


ನವದೆಹಲಿ, ಸೆಪ್ಟೆಂಬರ್ 28:

ದೆಹಲಿಯಲ್ಲಿ ವಾಯು ಮಾಲಿನ್ಯ ನಿಯಂತ್ರಣ ಕುರಿತು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಭೂಪೇಂದ್ರ ಯಾದವ್ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಪರಿಸರ ಭವನದಲ್ಲಿ ಸಭೆ ನಡೆಯಿತು. ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಹಾಗೂ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಸಭೆಯಲ್ಲಿ ಭಾಗವಹಿಸಿದ್ದರು

ದೆಹಲಿ ನಿವಾಸಿಗಳಿಗೆ ಸ್ವಚ್ಛ ಗಾಳಿ ಮತ್ತು ಆರೋಗ್ಯಕರ ಪರಿಸರ ಒದಗಿಸುವುದು ತಮ್ಮ ಸರ್ಕಾರದ ಅತ್ಯುನ್ನತ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ರೇಖಾ ಗುಪ್ತಾ ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ತಿಳಿಸಿದ್ದಾರೆ.

ಮಾಲಿನ್ಯ ನಿಯಂತ್ರಣವು ಯಾವುದೇ ಒಂದು ಋತುವಿಗೆ ಸೀಮಿತವಾದ ವಿಷಯವಲ್ಲ. ಸರ್ಕಾರ ವರ್ಷವಿಡೀ ಮಾಲಿನ್ಯದ ಪ್ರಮುಖ ಮೂಲಗಳ ವಿರುದ್ಧ ಪರಿಣಾಮಕಾರಿ ಕ್ರಮ, ಇಲಾಖೆಗಳ ಸಮನ್ವಯ ಮತ್ತು ನೆಲಮಟ್ಟದಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆಯೊಂದಿಗೆ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಸಭೆಯಲ್ಲಿ ಕೇಂದ್ರ ಸಚಿವರು ನೀಡಿದ ಪ್ರಮುಖ ಸಲಹೆಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು. ವಾಯು ಮಾಲಿನ್ಯದ ವಿರುದ್ಧದ ಪ್ರಯತ್ನಗಳಿಗೆ ಕೇಂದ್ರ ಸರ್ಕಾರ ನಿರಂತರವಾಗಿ ನೀಡುತ್ತಿರುವ ಸಹಕಾರವು ದೆಹಲಿಯ ಕ್ರಮಗಳಿಗೆ ಮತ್ತಷ್ಟು ಬಲ ನೀಡುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

--------

ಹಿಂದೂಸ್ತಾನ್ ಸಮಾಚಾರ್ / Rakesh.M.B.


 rajesh pande