ಜ್ಞಾನೇಶಕುಮಾರ ವಜಾಗೊಳಿಸಿ, ಬಂಧಿಸಲು ಆಗ್ರಹಿಸಿ ಬಾಗಲಕೋಟೆಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ
ಬಾಗಲಕೋಟೆ, 28 ಸೆಪ್ಟೆಂಬರ್ (ಹಿ.ಸ.): ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ಅವರನ್ನು ಹುದ್ದೆಯಿಂದ ವಜಾಗೊಳಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಬಂಧಿಸಬೇಕು ಎಂದು ಆಗ್ರಹಿಸಿ ಬಾಗಲಕೋಟೆಯಲ್ಲಿ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕ ಉ
ಪ್ರತಿಭಟನೆ


ಬಾಗಲಕೋಟೆ, 28 ಸೆಪ್ಟೆಂಬರ್ (ಹಿ.ಸ.):

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ ಅವರನ್ನು ಹುದ್ದೆಯಿಂದ ವಜಾಗೊಳಿಸಿ, ಅವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಬಂಧಿಸಬೇಕು ಎಂದು ಆಗ್ರಹಿಸಿ ಬಾಗಲಕೋಟೆಯಲ್ಲಿ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಮಾತನಾಡಿದ ಶಾಸಕ ಉಮೇಶ ಮೇಟಿ ಚುನಾವಣಾ ಆಯೋಗದ ಇತ್ತೀಚಿನ ಕ್ರಮಗಳು ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದ ವಿಷಯಗಳ ಕುರಿತು ಕಾಂಗ್ರೆಸ್ ಪಕ್ಷ ಹಲವು ಪ್ರಶ್ನೆಗಳನ್ನು ಎತ್ತಿದೆ. ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆ, ಮತದಾರರ ಹಕ್ಕುಗಳ ರಕ್ಷಣೆ ಮತ್ತು ಪ್ರಜಾಪ್ರಭುತ್ವದ ವಿಶ್ವಾಸಾರ್ಹತೆ ಕುರಿತು ಸಾರ್ವಜನಿಕರಲ್ಲಿ ಉಂಟಾಗಿರುವ ಅನುಮಾನಗಳಿಗೆ ಸೂಕ್ತ ಉತ್ತರ ನೀಡಬೇಕಾಗಿದೆ ಎಂದು ಒತ್ತಾಯಿಸಿದರು.

ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ವಿರೋಧ ಪಕ್ಷದ ಸಂಸದರು ಈ ಹಿಂದೆ ಸಂಸತ್ತಿನಲ್ಲಿ ವಜಾ ಪ್ರಸ್ತಾವನೆಗೆ ಸಂಬಂಧಿಸಿದ ನೋಟಿಸ್ ಸಲ್ಲಿಸಿರುವುದನ್ನೂ ಅವರು ಪ್ರಸ್ತಾಪಿಸಿದರು.

ಚುನಾವಣಾ ಆಯೋಗವು ಸಂವಿಧಾನಾತ್ಮಕ ಸಂಸ್ಥೆಯಾಗಿದ್ದು, ಅದರ ಕಾರ್ಯವೈಖರಿ ಪಕ್ಷಾತೀತ ಹಾಗೂ ಪಾರದರ್ಶಕವಾಗಿರಬೇಕು. ಯಾವುದೇ ರಾಜಕೀಯ ಪಕ್ಷ ಅಥವಾ ವ್ಯಕ್ತಿಯ ಪರವಾಗಿ ಸಂಸ್ಥೆಯ ಮೇಲೆ ಅನುಮಾನ ಮೂಡುವಂತಹ ಪರಿಸ್ಥಿತಿ ನಿರ್ಮಾಣವಾಗಬಾರದು. ಮತದಾರರ ಹಕ್ಕು ಹಾಗೂ ಚುನಾವಣಾ ವ್ಯವಸ್ಥೆಯ ಮೇಲಿನ ಜನರ ನಂಬಿಕೆಯನ್ನು ಉಳಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಮೇಟಿ ಹೇಳಿದರು.

ಬಾಗಲಕೋಟೆಯಲ್ಲಿ ನಡೆದ ಪ್ರತಿಭಟನೆಯಲ್ಲಿ ಕಾಂಗ್ರೆಸ್ ಮುಖಂಡರು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡು ಚುನಾವಣಾ ಆಯೋಗದ ವಿರುದ್ಧ ಘೋಷಣೆಗಳನ್ನು ಕೂಗಿದರು. ಜ್ಞಾನೇಶಕುಮಾರ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಹಾಗೂ ಅವರ ವಿರುದ್ಧ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande