
ಬೆಂಗಳೂರು, 28 ಸೆಪ್ಟೆಂಬರ್ (ಹಿ.ಸ.):
ಕನಕಪುರ ಮುಖ್ಯರಸ್ತೆಯಲ್ಲಿ ಬೈಕ್ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಬೈಕ್ ಸವಾರ ಗಾಯಗೊಂಡಿರುವ ಘಟನೆ ನಡೆದಿದೆ.
ಡಿಕ್ಕಿಯ ರಭಸಕ್ಕೆ ಬೈಕ್ ಸವಾರನಿಗೆ ಗಾಯಗಳಾಗಿದ್ದು, ತಕ್ಷಣ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ಬಳಿಕ ಲಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಘಟನೆಯ ನಂತರ ಲಾರಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತಕ್ಕೆ ನಿಖರ ಕಾರಣವೇನು ಎಂಬುದರ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R