ಶಿಕಾರಿಪುರದಿಂದ ಸೆ.30ಕ್ಕೆ ‘ಭಾರತ್ ಜೋಡೊ-2’ ಯಾತ್ರೆ ಆರಂಭ
ಬೆಂಗಳೂರು, 28 ಸೆಪ್ಟೆಂಬರ್ (ಹಿ.ಸ.): ಕಾಂಗ್ರೆಸ್ ಪಕ್ಷದ ವತಿಯಿಂದ ‘ಭಾರತ್ ಜೋಡೊ-2’ ಪಾದಯಾತ್ರೆಯನ್ನು ಸೆಪ್ಟೆಂಬರ್ 30ರಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಿಂದ ಆರಂಭಿಸಲು ನಿರ್ಧರಿಸಲಾಗಿದೆ. 2022ರ ಸೆಪ್ಟೆಂಬರ್ 30ರಂದು ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆ ಕರ್ನಾಟಕ ಪ್ರವೇಶಿಸಿದ ದ
bharat-jodo-2-yatra-to-begin-from-shikaripura-september-30


ಬೆಂಗಳೂರು, 28 ಸೆಪ್ಟೆಂಬರ್ (ಹಿ.ಸ.):

ಕಾಂಗ್ರೆಸ್ ಪಕ್ಷದ ವತಿಯಿಂದ ‘ಭಾರತ್ ಜೋಡೊ-2’ ಪಾದಯಾತ್ರೆಯನ್ನು ಸೆಪ್ಟೆಂಬರ್ 30ರಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಿಂದ ಆರಂಭಿಸಲು ನಿರ್ಧರಿಸಲಾಗಿದೆ.

2022ರ ಸೆಪ್ಟೆಂಬರ್ 30ರಂದು ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆ ಕರ್ನಾಟಕ ಪ್ರವೇಶಿಸಿದ ದಿನದ ಸ್ಮರಣಾರ್ಥವಾಗಿ ಈ ಯಾತ್ರೆ ಹಮ್ಮಿಕೊಳ್ಳಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರ ನೇತೃತ್ವದಲ್ಲಿ ನಡೆಯಲಿರುವ ಯಾತ್ರೆಯು ಕಾಂಗ್ರೆಸ್ ಈ ಹಿಂದೆ ಯಾತ್ರೆ ನಡೆಸದ 29 ಜಿಲ್ಲೆಗಳಲ್ಲೂ ಸಾಗಲಿದೆ.

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲು ಕಂಡ 84 ವಿಧಾನಸಭಾ ಕ್ಷೇತ್ರಗಳನ್ನು ಯಾತ್ರೆಯ ವ್ಯಾಪ್ತಿಗೆ ಒಳಪಡಿಸಲಾಗಿದೆ ಎಂದು ಹರಿಪ್ರಸಾದ್ ತಿಳಿಸಿದ್ದಾರೆ.

ಪ್ರತಿ ಕ್ಷೇತ್ರದಲ್ಲಿ ಬೆಳಿಗ್ಗೆ ಪಾದಯಾತ್ರೆ ಹಾಗೂ ಸಂಜೆ ಸಾರ್ವಜನಿಕ ಸಭೆ ನಡೆಸಲು ಉದ್ದೇಶಿಸಲಾಗಿದೆ. ಕೇಂದ್ರ ಸರ್ಕಾರದ ನೀತಿಗಳು, ಎಸ್ಐಆರ್ ಸೇರಿದಂತೆ ವಿವಿಧ ವಿಚಾರಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದರ ಜತೆಗೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆಯೂ ಮಾಹಿತಿ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.

ಶಿಕಾರಿಪುರದಲ್ಲಿ ಸೆ.30ರಂದು ಬೆಳಿಗ್ಗೆ 10 ಗಂಟೆಗೆ ಪಾದಯಾತ್ರೆ ಆರಂಭವಾಗಲಿದ್ದು, ಕಿಟ್ಟದಹಳ್ಳಿಯಿಂದ ಮಡ್ಡಿಕೋಟೆ ಕ್ರಾಸ್, ಹೊಸನಗರ ಕ್ರಾಸ್, ನೆಲವಾಗಿಲು ಕ್ರಾಸ್ ಮೂಲಕ ಸುಮಾರು 10 ಕಿ.ಮೀ. ಕ್ರಮಿಸಿ ಶಿಕಾರಿಪುರ ನಗರ ಪ್ರವೇಶಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

“ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆ ಕರ್ನಾಟಕಕ್ಕೆ ಕಾಲಿಟ್ಟು ನಾಲ್ಕು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಶಿಕಾರಿಪುರದಲ್ಲಿ ಭಾರತ್ ಜೋಡೊ 2.0 ಪಾದಯಾತ್ರೆ ಆಯೋಜಿಸಲಾಗಿದೆ.

ದೇಶದಲ್ಲಿ ಸಹಬಾಳ್ವೆ ಮತ್ತು ಸಾಮರಸ್ಯದ ಸಂದೇಶವನ್ನು ಸಾರುವುದರ ಜತೆಗೆ ಜನರ ಸಮಸ್ಯೆಗಳಿಗೆ ಧ್ವನಿಯಾಗುವುದು ಯಾತ್ರೆಯ ಉದ್ದೇಶ,” ಎಂದು ಅವರು ಹೇಳಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande