
ಬೆಂಗಳೂರು, 28 ಸೆಪ್ಟೆಂಬರ್ (ಹಿ.ಸ.):
ಆ್ಯಂಕರ್:
ರಾಜರಾಜೇಶ್ವರಿನಗರ ವೈದ್ಯಕೀಯ ಕಾಲೇಜು ಸಮೀಪದ ಅಂಚೆಪಾಳ್ಯದಲ್ಲಿ ಕಾಡಾನೆ ದಾಳಿಗೆ 60 ವರ್ಷದ ನಾಗರಾಜ್ ಎಂಬ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಸಮೀಪ ಸೋಮವಾರ ಬೆಳಗ್ಗೆ ಸುಮಾರು 5 ಗಂಟೆಗೆ ಒಂಟಿ ಕಾಡಾನೆ ವ್ಯಕ್ತಿಯ ಮೇಲೆ ದಾಳಿ ನಡೆಸಿ ತುಳಿದು ಕೊಂದಿದೆ.
ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ನೀಡಿರುವ ಮಾಹಿತಿ ಪ್ರಕಾರ ದಾಳಿ ನಡೆಸಿದ ಕಾಡಾನೆ ಬಳಿಕ ಬಿ.ಎಂ. ಕಾವಲ್ ಮೀಸಲು ಅರಣ್ಯ ಪ್ರದೇಶದತ್ತ ತೆರಳಿದೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh.M.B.