11 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ: ವಿದೇಶಿ ಪ್ರಜೆ ಸೇರಿ 6 ಪೆಡ್ಲರ್ಗಳ ಬಂಧನ
ಬೆಂಗಳೂರು, 29 ಸೆಪ್ಟೆಂಬರ್ (ಹಿ.ಸ.): ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಅಕ್ರಮ ಮಾರಾಟ ಮತ್ತು ಸಾಗಾಟದ ವಿರುದ್ಧ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಸುಮಾರು ₹11 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡು ವಿದೇಶಿ ಪ್ರಜೆ ಸೇರಿದಂತೆ ಆರು ಮಂದಿ ಪೆಡ್ಲರ್ಗಳನ್ನು ಬಂಧಿಸಿರುವುದಾಗಿ ನಗರ ಪೋಲಿಸ್ ಆಯುಕ್ತ ಸೀಮ
11-crore-worth-drugs-seized-6-peddlers-including-foreign-national-arrested


ಬೆಂಗಳೂರು, 29 ಸೆಪ್ಟೆಂಬರ್ (ಹಿ.ಸ.):

ಬೆಂಗಳೂರಿನಲ್ಲಿ ಮಾದಕ ವಸ್ತುಗಳ ಅಕ್ರಮ ಮಾರಾಟ ಮತ್ತು ಸಾಗಾಟದ ವಿರುದ್ಧ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಸುಮಾರು ₹11 ಕೋಟಿ ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡು ವಿದೇಶಿ ಪ್ರಜೆ ಸೇರಿದಂತೆ ಆರು ಮಂದಿ ಪೆಡ್ಲರ್ಗಳನ್ನು ಬಂಧಿಸಿರುವುದಾಗಿ ನಗರ ಪೋಲಿಸ್ ಆಯುಕ್ತ ಸೀಮಂತ್ ಕುಮಾರ ಸಿಂಗ ತಿಳಿಸಿದ್ದಾರೆ.

ಬಂಧಿತರಿಂದ ಭಾರಿ ಪ್ರಮಾಣದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ನಗರದಲ್ಲಿ ಡ್ರಗ್ಸ್ ಮಾರಾಟ ಹಾಗೂ ಪೂರೈಕೆ ಜಾಲದಲ್ಲಿ ತೊಡಗಿಸಿಕೊಂಡಿರುವ ಮಾಹಿತಿ ಇದ್ದು ಈ ಕುರಿತು ಹೆಚ್ಚಿನ ತನಿಖೆ ಮುಂದುವರೆದಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

ಬಂಧಿತರು ಡ್ರಗ್ಸ್ ಅನ್ನು ಎಲ್ಲಿಂದ ತರಿಸುತ್ತಿದ್ದರು, ಯಾರಿಗೆ ಪೂರೈಕೆ ಮಾಡುತ್ತಿದ್ದರು ಹಾಗೂ ಈ ಜಾಲದ ಹಿಂದೆ ಇನ್ನೂ ಯಾರಾದರೂ ಇದ್ದಾರೆಯೇ ಎಂಬ ಬಗ್ಗೆ ತನಿಖೆ ಮುಂದುವರಿದಿದೆ.

ಮಾದಕ ವಸ್ತುಗಳ ಅಕ್ರಮ ಸಾಗಾಟ ಮತ್ತು ಮಾರಾಟದ ವಿರುದ್ಧ ಕಾರ್ಯಾಚರಣೆ ಮುಂದುವರಿಸಲಾಗುವುದು. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿಗಳನ್ನು ವಿಚಾರಣೆಗೊಳಪಡಿಸಿ, ಡ್ರಗ್ಸ್ ಜಾಲದ ಮೂಲ ಹಾಗೂ ಇತರ ಸಂಪರ್ಕಗಳ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಆಯುಕ್ತರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande