ಬಳ್ಳಾರಿ: ಅಕ್ಟೋಬರ್ 1 ರಂದು ನೇರ ಸಂದರ್ಶನ
ಬಳ್ಳಾರಿ, 29 ಸೆಪ್ಟೆಂಬರ್ (ಹಿ.ಸ.): ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅಕ್ಟೋಬರ್ 1 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಗರದ ಹಳೆಯ ತಾಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಐಸಿಐಸಿಐ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನವನ್
ಬಳ್ಳಾರಿ: ಅಕ್ಟೋಬರ್ 1 ರಂದು ನೇರ ಸಂದರ್ಶನ


ಬಳ್ಳಾರಿ, 29 ಸೆಪ್ಟೆಂಬರ್ (ಹಿ.ಸ.):

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅಕ್ಟೋಬರ್ 1 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಗರದ ಹಳೆಯ ತಾಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಐಸಿಐಸಿಐ ಬ್ಯಾಂಕ್ನಲ್ಲಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನವನ್ನು ಆಯೋಜಿಸಲಾಗಿದೆ.

ಐಸಿಐಸಿಐ ಬ್ಯಾಂಕ್ನಲ್ಲಿ ಖಾಲಿ ಇರುವ 35ಕ್ಕೂ ಹೆಚ್ಚು ರಿಲೇಶನ್ಶಿಪ್ ಮ್ಯಾನೇಜರ್ ಹುದ್ದೆಗಳನ್ನು ಈ ನೇರ ಸಂದರ್ಶನದ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತಿದೆ.

ವಿದ್ಯಾರ್ಹತೆ: ಪಿಯುಸಿ, ಪದವಿ ಅಥವಾ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿ ಗರಿಷ್ಠ 28 ವರ್ಷ ಮೀರಿರಬಾರದು. ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಬ್ಬರೂ ಸಂದರ್ಶನದಲ್ಲಿ ಭಾಗವಹಿಸಬಹುದು. ಸಂದರ್ಶನದಲ್ಲಿ ಪಾಲ್ಗೊಳ್ಳಲು ಯಾವುದೇ ಶುಲ್ಕ ಇರುವುದಿಲ್ಲ.

ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ-ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ನಿಗದಿತ ಸಮಯಕ್ಕೆ ಹಾಜರಾಗಲು ಕೋರಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳಾದ 7619207762, 9663263086, 7676774293, 6360408094 ಅಥವಾ 08392-273988 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande