


ಬಳ್ಳಾರಿ, 29 ಸೆಪ್ಟೆಂಬರ್ (ಹಿ.ಸ.):
ಯುಪಿಐ ವಹಿವಾಟಿನ ಮೇಲೆ ಎಂಡಿಆರ್ ಜಾರಿಗೆ ಕನ್ನಡನಾಡು ರೈತ ಸಂಘವು ತೀವ್ರ ವಿರೋಧ ವ್ಯಕ್ತಪಡಿಸಿ ಜಿಲ್ಲಾಡಳಿದ ಮೂಲಕ ಕೇಂದ್ರ ಸರ್ಕಾರಕ್ಕೆ ಮಂಗಳವಾರ ಮನವಿ ಸಲ್ಲಿಸಿದೆ.
ಕನ್ನಡನಾಡು ರೈತ ಸಂಘದ ಅಧ್ಯಕ್ಷ ಮೆಣಸಿನ ಈಶ್ವರಪ್ಪ ಅವರ ನೇತೃತ್ವದಲ್ಲಿ ಜಿಲ್ಲಾಡಳಿತದ ಮೂಲ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಯುಪಿಐ ವಹಿವಾಟಿನ ಮೇಲೆ ಎಂಡಿಆರ್ ಜಾರಿ ಮಾಡುವ ಆದೇಶವನ್ನೇ ಕೇಂದ್ರ ಸರ್ಕಾರ ಕೈಬಿಡಬೇಕು. ಈ ಆದೇಶವನ್ನು ಜಾರಿ ಮಾಡಿದಲ್ಲಿ ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ವರ್ಗದ ವ್ಯಾಪಾರಿಗಳು ಬಡಜನರ ಆರ್ಥಿಕ ಚಟುವಟಿಕೆಗಳ ಮೇಲೆ ತೀವ್ರ ಧಕ್ಕೆ ಉಂಟಾಗಲಿದೆ ಎಂದು ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್