ಇಳಕಲ್ ನಲ್ಲಿ ನರೇಂದ್ರ ಮೋದಿ ಜನ್ಮದಿನಾಚರಣೆ: ಉಚಿತ ಸಕ್ಕರೆ ಕಾಯಿಲೆ ಹಾಗೂ ಹೃದಯ ತಪಾಸಣಾ ಶಿಬಿರ
ಬಾಗಲಕೋಟೆ, 29 ಸೆಪ್ಟೆಂಬರ್ (ಹಿ.ಸ.): ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರಿಗೆ ಸಕ್ಕರೆ ಕಾಯಿಲೆ ಹಾಗೂ ಹೃದಯ ಸಂಬಂಧಿತ ಆರೋಗ್ಯ ತಪಾಸಣೆ ನಡೆಸಲಾಯಿತು. ಇಳಕಲ್ ನಗರದ ಖ್ಯಾತ
ಚಿಕಿತ್ಸೆ


ಬಾಗಲಕೋಟೆ, 29 ಸೆಪ್ಟೆಂಬರ್ (ಹಿ.ಸ.):

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದಲ್ಲಿ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಸಾರ್ವಜನಿಕರಿಗೆ ಸಕ್ಕರೆ ಕಾಯಿಲೆ ಹಾಗೂ ಹೃದಯ ಸಂಬಂಧಿತ ಆರೋಗ್ಯ ತಪಾಸಣೆ ನಡೆಸಲಾಯಿತು.

ಇಳಕಲ್ ನಗರದ ಖ್ಯಾತ ವೈದ್ಯರಾದ ಡಾ. ಮಹಾಂತೇಶ ಕಡಪಟ್ಟಿ ಅವರ ಆಸ್ಪತ್ರೆಯಲ್ಲಿ ನಡೆದ ಈ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಸೇರಿದಂತೆ ಹಲವರು ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಕಾರ್ಯಕ್ರಮದ ಮೂಲಕ ಜನರಲ್ಲಿ ಸಕ್ಕರೆ ಕಾಯಿಲೆ ಹಾಗೂ ಹೃದಯ ಸಂಬಂಧಿತ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಪ್ರಯತ್ನ ಮಾಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಷೇತ್ರದ ಮಾಜಿ ಶಾಸಕ ದೊಡ್ಡನಗೌಡ ಜಿ. ಪಾಟೀಲ ಅವರು ವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಆರೋಗ್ಯದ ಬಗ್ಗೆ ಪ್ರತಿಯೊಬ್ಬರೂ ಹೆಚ್ಚಿನ ಕಾಳಜಿ ವಹಿಸಬೇಕು. ಇತ್ತೀಚಿನ ದಿನಗಳಲ್ಲಿ ಸಕ್ಕರೆ ಕಾಯಿಲೆ ಹಾಗೂ ಹೃದಯ ಸಂಬಂಧಿತ ಸಮಸ್ಯೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನಿಯಮಿತ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ತಿಳಿಸಿದರು.

ಶಿಬಿರದಲ್ಲಿ ಸಕ್ಕರೆ ಕಾಯಿಲೆಯ ತಪಾಸಣೆ ಸೇರಿದಂತೆ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದ ತಪಾಸಣೆಗಳನ್ನು ನಡೆಸಲಾಯಿತು. ಆರೋಗ್ಯ ಸಮಸ್ಯೆಗಳ ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಸೂಕ್ತ ವೈದ್ಯಕೀಯ ಸಲಹೆ ಪಡೆಯಲು ಇಂತಹ ಉಚಿತ ಆರೋಗ್ಯ ಶಿಬಿರಗಳು ಸಹಕಾರಿಯಾಗುತ್ತವೆ ಎಂದು ವೈದ್ಯರು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮೀಣ ಮಂಡಲ ಅಧ್ಯಕ್ಷ ಮಹಾಂತಗೌಡ ಪಾಟೀಲ (ತೊಂಡಿಹಾಳ), ಮಾಜಿ ನಗರಸಭೆ ಸದಸ್ಯ ಚಂದ್ರಶೇಖರ ಏಕಬೊಟೆ, ಬಿಜೆಪಿ ಪಕ್ಷದ ಹಿರಿಯರಾದ ಶಾಮ್ ಕಾರವಾ ಸೇರಿದಂತೆ ಪಕ್ಷದ ಹಿರಿಯ ಮುಖಂಡರು, ಕಾರ್ಯಕರ್ತರು, ಆಸ್ಪತ್ರೆಯ ಸಿಬ್ಬಂದಿ ವರ್ಗ ಹಾಗೂ ಕಾಲೇಜು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande