ಸರ್ಕಾರಿ ನೌಕರರ ಸೇವಾ ಪ್ರಶಸ್ತಿ : ಅರ್ಜಿ ಆಹ್ವಾನ
ಬಳ್ಳಾರಿ, 29 ಸೆಪ್ಟೆಂಬರ್ (ಹಿ.ಸ.) ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ನೀಡಲಾಗುವ ಸರ್ಕಾರಿ ನೌಕರರ ಸೇವಾ ಪ್ರಶಸ್ತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳನ್ನು ಅಕ್ಟೋಬರ್ 15 ರೊಳಗೆ ನಾಮನಿರ್ದೇಶನ ಮಾಡಬಹುದಾಗಿದೆ. ಕರ್ತವ್ಯ ನಿಷ್ಠೆ, ಗುಣಮಟ್ಟದ ಹಾಗೂ ಪ್ರಾಮ
ಸರ್ಕಾರಿ ನೌಕರರ ಸೇವಾ ಪ್ರಶಸ್ತಿ : ಅರ್ಜಿ ಆಹ್ವಾನ


ಬಳ್ಳಾರಿ, 29 ಸೆಪ್ಟೆಂಬರ್ (ಹಿ.ಸ.)

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ನೀಡಲಾಗುವ ಸರ್ಕಾರಿ ನೌಕರರ ಸೇವಾ ಪ್ರಶಸ್ತಿಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳನ್ನು ಅಕ್ಟೋಬರ್ 15 ರೊಳಗೆ ನಾಮನಿರ್ದೇಶನ ಮಾಡಬಹುದಾಗಿದೆ.

ಕರ್ತವ್ಯ ನಿಷ್ಠೆ, ಗುಣಮಟ್ಟದ ಹಾಗೂ ಪ್ರಾಮಾಣಿಕ ಸೇವೆ, ಸಾರ್ವಜನಿಕ ಹಿತಕ್ಕಾಗಿ ಕೈಗೊಂಡ ವಿಶೇಷ ಕಾರ್ಯಗಳು, ಕಚೇರಿ ಕಾರ್ಯಕ್ಷಮತೆ, ಸಮಯ ಪಾಲನೆ, ದುರ್ಬಲ ವರ್ಗಗಳ ಬಗ್ಗೆ ಕಾಳಜಿ ಮತ್ತು ಸಹೋದ್ಯೋಗಿಗಳೊಂದಿಗೆ ಉತ್ತಮ ಸಮನ್ವಯ ಹೊಂದಿರುವುದನ್ನು ಈ ಪ್ರಶಸ್ತಿಗೆ ಮಾನದಂಡವಾಗಿ ಪರಿಗಣಿಸಲಾಗುತ್ತದೆ.

*ಅರ್ಹತೆಗಳು:*

ರಾಜ್ಯ ಸರ್ಕಾರದ ಗ್ರೂಪ್ ಎ, ಬಿ, ಸಿ ಮತ್ತು ಡಿ ವೃಂದದ ಖಾಯಂ ನೌಕರರು ಅರ್ಹರು. ಸಂಘಕ್ಕೆ ಪ್ರತಿ ವರ್ಷ ಸದಸ್ಯತ್ವ ಶುಲ್ಕ ಪಾವತಿಸಿರಬೇಕು. ಸರ್ಕಾರಿ ಸೇವೆಗೆ ಸೇರ್ಪಡೆಗೊಂಡು ಕನಿಷ್ಠ ಐದು ವರ್ಷ ಪೂರೈಸಿರಬೇಕು.

*ನಾಮನಿರ್ದೇಶನಕ್ಕೆ ಅವಕಾಶ:*

ಅರ್ಹ ಅಧಿಕಾರಿಗಳು ಅಥವಾ ನೌಕರರು ಪ್ರಶಸ್ತಿಗೆ ಸ್ವಯಂ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ಇಲಾಖಾ ಮುಖ್ಯಸ್ಥರು, ಮೇಲಾಧಿಕಾರಿಗಳು, ಸಹೋದ್ಯೋಗಿಗಳು, ಸಂಘ-ಸ0ಸ್ಥೆಗಳು, ಸಾರ್ವಜನಿಕರು ಹಾಗೂ ಸರ್ಕಾರಿ ನೌಕರರ ಸಂಘದ ಜಿಲ್ಲಾ ಮತ್ತು ತಾಲೂಕು ಅಧ್ಯಕ್ಷರು/ಪದಾಧಿಕಾರಿಗಳು ಅರ್ಹರನ್ನು ನಾಮನಿರ್ದೇಶನ ಮಾಡಬಹುದು.

ಅಧಿಕಾರಿ/ನೌಕರರ ಇತ್ತೀಚಿನ ಭಾವಚಿತ್ರದೊಂದಿಗೆ POWER MEDIA.INFO ಮೂಲಕ ಅಕ್ಟೋಬರ್ 15 ರೊಳಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬಳ್ಳಾರಿ ಜಿಲ್ಲಾ ಶಾಖೆಯ ಜಿಲ್ಲಾಧ್ಯಕ್ಷ ಸದಾನಂದ ನೆಲ್ಕುದ್ರಿ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande