ಅಕ್ಟೋಬರ್ 1 : ವಿಶ್ವ ಹಿರಿಯ ನಾಗರಿಕರ ದಿನಾಚರಣೆ
ಬಳ್ಳಾರಿ, 29 ಸೆಪ್ಟೆಂಬರ್ (ಹಿ.ಸ.) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 01 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಹಮ್
ಅಕ್ಟೋಬರ್ 1 : ವಿಶ್ವ ಹಿರಿಯ ನಾಗರಿಕರ ದಿನಾಚರಣೆ


ಬಳ್ಳಾರಿ, 29 ಸೆಪ್ಟೆಂಬರ್ (ಹಿ.ಸ.)

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 01 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯ ಎಲ್ಲಾ ಹಿರಿಯ ನಾಗರಿಕರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಹೆಚ್.ಗೋವಿಂದಪ್ಪ ಅವರು ಕೋರಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande