ರಂಗಾಯಣ: ತಾತ್ಕಾಲಿಕ ರೆಪರ್ಟರಿ ಕಲಾವಿದರ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಬಳ್ಳಾರಿ, 29 ಸೆಪ್ಟೆಂಬರ್ (ಹಿ.ಸ.) ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಕರ್ನಾಟಕ ರಂಗಾಯಣ, ಕಲಬುರಗಿಯು ಸಿದ್ಧಪಡಿಸುವ ನಾಟಕಗಳಿಗೆ ಹಾಗೂ ವಿವಿಧ ರಂಗ ಚಟುವಟಿಕೆಗಳಿಗಾಗಿ ಒಂದು ವರ್ಷದ ಅವಧಿಗೆ 12 ಜನ ತಾತ್ಕಾಲಿಕ ರೆಪರ್ಟರಿ ಕಲಾವಿದರ ನೇಮಕಾತಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನ
ರಂಗಾಯಣ: ತಾತ್ಕಾಲಿಕ ರೆಪರ್ಟರಿ ಕಲಾವಿದರ ನೇಮಕಾತಿ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ


ಬಳ್ಳಾರಿ, 29 ಸೆಪ್ಟೆಂಬರ್ (ಹಿ.ಸ.)

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಕರ್ನಾಟಕ ರಂಗಾಯಣ, ಕಲಬುರಗಿಯು ಸಿದ್ಧಪಡಿಸುವ ನಾಟಕಗಳಿಗೆ ಹಾಗೂ ವಿವಿಧ ರಂಗ ಚಟುವಟಿಕೆಗಳಿಗಾಗಿ ಒಂದು ವರ್ಷದ ಅವಧಿಗೆ 12 ಜನ ತಾತ್ಕಾಲಿಕ ರೆಪರ್ಟರಿ ಕಲಾವಿದರ ನೇಮಕಾತಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಿದೆ.

ಈ ಹಿಂದೆ ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿತ್ತು. ಈಗ ಈ ಅವಧಿಯನ್ನು ಅಕ್ಟೋಬರ್ 15 ರವರೆಗೆ ವಿಸ್ತರಿಸಲಾಗಿದೆ ಎಂದು ರಂಗಾಯಣದ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.

ಆಸಕ್ತ ಕಲಾವಿದರು ನಿಗದಿತ ಅರ್ಜಿ ನಮೂನೆಯಲ್ಲಿ ಭರ್ತಿ ಮಾಡಿ, ಅ.15 ರ ಸಂಜೆ 5:30ರ ಒಳಗೆ ತಲುಪುವಂತೆ ಖುದ್ದಾಗಿ, ಅಂಚೆ ಮೂಲಕ ಅಥವಾ ಇ-ಮೇಲ್ ಮೂಲಕ ಸಲ್ಲಿಸಬಹುದಾಗಿದೆ.

*ವಿಳಾಸ:*

ಆಡಳಿತಾಧಿಕಾರಿಗಳು, ರಂಗಾಯಣ, ಡಾ. ಸಿದ್ದಯ್ಯ ಪುರಾಣಿಕ ಸುವರ್ಣ ಸಾಂಸ್ಕೃತಿಕ ಸಮುಚ್ಚಯ, ಸೇಡಂ-ಶಹಾಬಾದ ವರ್ತುಲ ರಸ್ತೆ, ಕಲಬುರಗಿ - 585105.

ಅರ್ಜಿ ನಮೂನೆಗಾಗಿ ರಂಗಾಯಣದ ಅಧಿಕೃತ ವೆಬ್ಸೈಟ್ www.rangayanakalaburagi.karnataka.gov.in ಅಥವಾ ಅಧಿಕೃತ ಫೇಸ್ಬುಕ್ ಪುಟದಿಂದ ಡೌನ್ಲೋಡ್ ಮಾಡಿಕೊಳ್ಳಬಹುದು.

ಸಂದರ್ಶನದ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು. ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳು ರಂಗಾಯಣದ ನಿಯಮ ಹಾಗೂ ಷರತ್ತುಗಳಿಗೆ ಬದ್ಧರಾಗಿರಬೇಕಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ದೂರವಾಣಿ ಸಂಖ್ಯೆ 08472-227735 ಅನ್ನು ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande