
ಬೆಂಗಳೂರು, 29 ಸೆಪ್ಟೆಂಬರ್ (ಹಿ.ಸ.):
ಮಾಂಸ ಮಾರಾಟ ಅಂಗಡಿಯನ್ನು ಬಳಸಿಕೊಂಡು ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳು ಮಟನ್ ಅಂಗಡಿಯ ನೆಪದಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದರು ಎನ್ನಲಾಗಿದ್ದು, ಖಚಿತ ಮಾಹಿತಿ ಆಧರಿಸಿ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಗಳಿಂದ ಎಂಡಿಎಂಎ ಸೇರಿದಂತೆ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದ ವಸ್ತುಗಳನ್ನುವಶಪಡಿಸಿಕೊಂಡಿದ್ದಾರೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಎಂಡಿಎಂಎ ಎಲ್ಲಿಂದ ಪೂರೈಕೆಯಾಗುತ್ತಿತ್ತು, ಯಾರಿಗೆ ಮಾರಾಟ ಮಾಡಲಾಗುತ್ತಿತ್ತು ಹಾಗೂ ಈ ಜಾಲದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ.
“ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ. ಮಾದಕ ವಸ್ತು ಮಾರಾಟ ಜಾಲದ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದ್ದು, ತನಿಖೆ ಮುಂದುವರಿದಿದೆ” ಎಂದು ಪೊಲೀಸ ಪ್ರಕಟಣೆ ತಿಳಿಸಿದೆ.
---------------
ಹಿಂದೂಸ್ತಾನ್ ಸಮಾಚಾರ್ / BHARGAVI G R