ಅಂಚೆಪಾಳ್ಯ ಪ್ರದೇಶದಲ್ಲಿ ಚಿರತೆ ಓಡಾಟ; ಸ್ಥಳೀಯರಲ್ಲಿ ಆತಂಕ
ಬೆಂಗಳೂರು, 29 ಸೆಪ್ಟೆಂಬರ್ (ಹಿ.ಸ.): ನಗರದ ಅಂಚೆಪಾಳ್ಯ ಪ್ರದೇಶದಲ್ಲಿ ಮುಂಜಾನೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಅಂಚೆಪಾಳ್ಯದ ನಿರ್ಜನ ಹಾಗೂ ಖಾಲಿ ಜಾಗದಲ್ಲಿ ಚಿರತೆ ಓಡಾಡುತ್ತಿರುವ ದೃಶ್ಯ ಭದ್ರತಾ ಸಿಬ್ಬಂದಿಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಂಗಳವಾರ
ಅಂಚೆಪಾಳ್ಯ ಪ್ರದೇಶದಲ್ಲಿ ಚಿರತೆ ಓಡಾಟ; ಸ್ಥಳೀಯರಲ್ಲಿ ಆತಂಕ


ಬೆಂಗಳೂರು, 29 ಸೆಪ್ಟೆಂಬರ್ (ಹಿ.ಸ.):

ನಗರದ ಅಂಚೆಪಾಳ್ಯ ಪ್ರದೇಶದಲ್ಲಿ ಮುಂಜಾನೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ಅಂಚೆಪಾಳ್ಯದ ನಿರ್ಜನ ಹಾಗೂ ಖಾಲಿ ಜಾಗದಲ್ಲಿ ಚಿರತೆ ಓಡಾಡುತ್ತಿರುವ ದೃಶ್ಯ ಭದ್ರತಾ ಸಿಬ್ಬಂದಿಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಮಂಗಳವಾರ ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಚಿರತೆ ನಿರ್ಜನ ಪ್ರದೇಶದಲ್ಲಿ ಓಡಾಡಿರುವುದನ್ನು ಭದ್ರತಾ ಸಿಬ್ಬಂದಿ ಗಮನಿಸಿದ್ದಾರೆ. ಕೂಡಲೇ ಅವರು ಚಿರತೆಯ ಚಲನವಲನವನ್ನು ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ.

ಸೋಮವಾರ ಇದೇ ಅಂಚೆಪಾಳ್ಯ ಪ್ರದೇಶದ ಸಮೀಪ ಕಾಡಾನೆ ಕಾಣಿಸಿಕೊಂಡು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿತ್ತು. ಇದೀಗ ಅದೇ ಭಾಗದ ಸಮೀಪ ಚಿರತೆ ಕಾಣಿಸಿಕೊಂಡಿರುವುದು ನಿವಾಸಿಗಳ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.

“ನಿರ್ಜನ ಪ್ರದೇಶದಲ್ಲಿ ಚಿರತೆ ಓಡಾಡಿರುವುದು ಆತಂಕಕ್ಕೆ ಕಾರಣವಾಗಿದೆ. ಜನರು ಓಡಾಡುವ ಪ್ರದೇಶವಾಗಿರುವುದರಿಂದ ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಂಡು ಚಿರತೆಯ ಚಲನವಲನದ ಬಗ್ಗೆ ಮಾಹಿತಿ ನೀಡಬೇಕು” ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ಚಿರತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಮುಂಜಾನೆ ಹಾಗೂ ರಾತ್ರಿ ವೇಳೆ ನಿರ್ಜನ ಪ್ರದೇಶಗಳಿಗೆ ತೆರಳದಂತೆ ಎಚ್ಚರಿಕೆ ವಹಿಸುವ ಅಗತ್ಯವಿದೆ. ಅರಣ್ಯ ಇಲಾಖೆ ಚಿರತೆಯ ಚಲನವಲನದ ಮೇಲೆ ನಿಗಾ ವಹಿಸಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / BHARGAVI G R


 rajesh pande