
ಬಳ್ಳಾರಿ, 03 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ 2026-27ನೇ ಸಾಲಿನ ವಿವಿಧ ಸಾಲ ಹಾಗೂ ಸೌಲಭ್ಯ ಯೋಜನೆಗಳ ಅನುಷ್ಠಾನಕ್ಕಾಗಿ ಅರ್ಹ ಫಲಾನುಭವಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಅಕ್ಟೋಬರ್ 15 ಕೊನೆಯ ದಿನವಾಗಿದೆ.
*ಯೋಜನೆಗಳು:*
ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಬ್ಯಾಂಕ್ಗಳ ಸಹಯೋಗದೊಂದಿಗೆ ಆರ್ಯ ವೈಶ್ಯ ಆಹಾರ ವಾಹಿನಿ / ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ, . ಅರಿವು ಶೈಕ್ಷಣಿಕ ಸಾಲ ಯೋಜನೆ: ಸಿಇಟಿ ಹಾಗೂ ನೀಟ್ ಕೌನ್ಸಿಲಿಂಗ್ ಪ್ರಕ್ರಿಯೆ ಮುಗಿದ ನಂತರ ಈ ಯೋಜನೆಗೆ ಪ್ರತ್ಯೇಕವಾಗಿ ಅರ್ಜಿ ಆಹ್ವಾನಿಸಲಾಗುವುದು.
*ಅರ್ಹತೆಗಳು:*
ಅರ್ಜಿದಾರರು ಸಾಮಾನ್ಯ ವರ್ಗದ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿದವರಾಗಿರಬೇಕು ಹಾಗೂ ಸಕ್ಷಮ ಪ್ರಾಧಿಕಾರದಿಂದ ಪಡೆದ ‘ನಮೂನೆ-ಜಿ’ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಹೊಂದಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿದ್ದು, ಖಾಯಂ ವಿಳಾಸ ರಾಜ್ಯದಲ್ಲಿಯೇ ಇರಬೇಕು.
ಅರ್ಜಿದಾರರ ಮೊಬೈಲ್ ಸಂಖ್ಯೆಯು ಆಧಾರ್ ಸಂಖ್ಯೆಯೊ0ದಿಗೆ ಜೋಡಣೆಯಾಗಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಆಗಿರುವುದು ಕಡ್ಡಾಯವಾಗಿದೆ.
2019-20 ರಿಂದ 2021-22ನೇ ಸಾಲಿನವರೆಗೆ ಸ್ವಯಂ ಉದ್ಯೋಗ ನೇರ ಸಾಲ ಯೋಜನೆಯಡಿ ಸಾಲ ಪಡೆದು, ಅದನ್ನು ಸಕಾಲದಲ್ಲಿ ಸಂಪೂರ್ಣವಾಗಿ ಮರುಪಾವತಿಸಿದ ಫಲಾನುಭವಿಗಳಿಗೂ ಕೂಡ ಮರು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
ಅರ್ಹ ಫಲಾನುಭವಿಗಳನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅಧ್ಯಕ್ಷತೆಯಲ್ಲಿ ರಚಿಸಲಾದ ಜಿಲ್ಲಾ ಮಟ್ಟದ ಆಯ್ಕೆ ಸಮಿತಿಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಆಸಕ್ತರು ನಿಗಮದ ಬಳ್ಳಾರಿ ಜಿಲ್ಲಾ ಕಚೇರಿಯ ಸಹಾಯವಾಣಿ ಸಂಖ್ಯೆ 08392-267038 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಟಿ. ಹೊನ್ನೂರಪ್ಪ ಅವರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್