ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು
ಗದಗ, 03 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್:- ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸಮೀಪ ಯಲಬುರ್ಗಾ–ಬಾದಾಮಿ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು 55 ವರ್ಷದ ಈರಪ್ಪ ಸಂಗನಾಳ ಎಂದು ಗುರುತಿಸಲಾಗಿದೆ. ಯಲಬುರ್
ಫೋಟೋ


ಗದಗ, 03 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:- ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದ ಸಮೀಪ ಯಲಬುರ್ಗಾ–ಬಾದಾಮಿ ಹೆದ್ದಾರಿಯಲ್ಲಿ ನಡೆದಿದೆ.

ಮೃತರನ್ನು 55 ವರ್ಷದ ಈರಪ್ಪ ಸಂಗನಾಳ ಎಂದು ಗುರುತಿಸಲಾಗಿದೆ. ಯಲಬುರ್ಗಾ–ಬಾದಾಮಿ ಹೆದ್ದಾರಿಯಲ್ಲಿ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದ ಬಳಿಕ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಹೊಲಕ್ಕೆ ಉರುಳಿ ಬಿದ್ದಿದೆ. ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಮಾಹಿತಿ ತಿಳಿಯುತ್ತಿದ್ದಂತೆ ಗಜೇಂದ್ರಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಪಘಾತಕ್ಕೆ ಕಾರಣವೇನು ಎಂಬುದರ ಕುರಿತು ಪೊಲೀಸರು ಮಾಹಿತಿ ಕಲೆಹಾಕಿದ್ದಾರೆ.

ಮೃತದೇಹವನ್ನು ಅಗತ್ಯ ಪ್ರಕ್ರಿಯೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande