ಕೂಲಿಕಾರರು ಸರಿಯಾಗಿ ಕೆಲಸ ಮಾಡಿದರೆ ನಿರಂತರ ಕೆಲಸ: ಚಂದ್ರಶೇಖರ ಬಿ ಕಂದಕೂರ
ಗದಗ, 03 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್:- “ಗ್ರಾಮೀಣ ಪ್ರದೇಶದ ಕೂಲಿಕಾರರ ಗುಳೆ ತಪ್ಪಿಸಿ ಸ್ಥಳೀಯವಾಗಿ ಉದ್ಯೋಗ ಕಲ್ಪಿಸಲು ವಿಬಿ ಜಿ ರಾಮ್ ಜಿ ಯೋಜನೆಯಡಿ 125 ದಿನಗಳ ಕೆಲಸ ದೊರೆಯಲಿದೆ” ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಚಂದ್ರಶೇಖರ ಬಿ ಕಂದಕೂರ ಹೇಳಿದರು. ಗದಗ ಜಿಲ್ಲೆ ಗಜೇಂದ್
ಫೋಟೋ


ಗದಗ, 03 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್:- “ಗ್ರಾಮೀಣ ಪ್ರದೇಶದ ಕೂಲಿಕಾರರ ಗುಳೆ ತಪ್ಪಿಸಿ ಸ್ಥಳೀಯವಾಗಿ ಉದ್ಯೋಗ ಕಲ್ಪಿಸಲು ವಿಬಿ ಜಿ ರಾಮ್ ಜಿ ಯೋಜನೆಯಡಿ 125 ದಿನಗಳ ಕೆಲಸ ದೊರೆಯಲಿದೆ” ಎಂದು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಚಂದ್ರಶೇಖರ ಬಿ ಕಂದಕೂರ ಹೇಳಿದರು.

ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ನಿಡಗುಂದಿ ಗ್ರಾಮದ ಹೊಸ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳದಲ್ಲಿ ಗುರುವಾರ ವಿಬಿ ಜಿ ರಾಮ್ ಜಿ ಯೋಜನೆಯಡಿ ಐಇಸಿ ಚಟುವಟಿಕೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಯಾರು ಗುಳೆ ಹೋಗದೆ ತಮ್ಮ ಊರಿನಲ್ಲಿ ಸರ್ಕಾರ ನಿಗದಿ ಪಡಿಸಿದ ದಿನಗಳ ವರೆಗೆ ಕೆಲಸ ಮಾಡಬೇಕು. ವೈಯಕ್ತಿಕ ಕಾಮಗಾರಿಗಳ ಲಾಭ ಪಡೆದುಕೊಳ್ಳಬೇಕು ಎಂದರು.

ವಿಬಿ ಜಿ ರಾಮ್ ಜಿ ಯೋಜನೆಯಡಿ 125 ದಿನಗಳ ಕೆಲಸ ಪಡೆಯಬೇಕಾದರೆ ಕೂಲಿಕಾರರು ಸರಿಯಾಗಿ ಕೆಲಸ ಮಾಡಿದಾಗ ಮಾತ್ರ ನಿಮಗೆ ನಿರಂತರ ಕೆಲಸ ನೀಡುತ್ತೇವೆ. ಅಂದಾಗ 125 ದಿನಗಳ ಕಾಲ ಕೆಲಸ ಪಡೆದುಕೊಳ್ಳಬಹುದು. ಆ ನಿಟ್ಟಿನಲ್ಲಿ ನಿಡಗುಂದಿ ಗ್ರಾಮ ಎಲ್ಲಾ ಕೂಲಿಕಾರರು ಕೆಲಸ ಮಾಡಬೇಕು ಎಂದು ಹೇಳಿದರು.

ಹೊಸ ಕರೆ ಮಾದರಿಯಾಗಲಿ, ನಿಡಗುಂದಿ ಗ್ರಾಮದ ಹೊಸ ಕೆರೆಯು ಕೆರೆಯಂತೆ ಕಾಣುತ್ತಿಲ್ಲ. ಇದರಲ್ಲಿ ಮುಳ್ಳುಕಂಠಿ, ಗಿಡ, ಜಾಲಿಮರ ಬೆಳೆದು, ಹೂಳು ತುಂಬಿ ಕರೆಯೂ ತನ್ನ ಆಕಾರವನ್ನು ಕಳೆದುಕೊಂಡು ನೀರು ನಿಲ್ಲದಂತ್ತಾಗಿದೆ. ಕೆರೆ ಪುನಶ್ಚೇತನಕ್ಕಾಗಿ ವಿಬಿ ಜಿ ರಾಮ್ ಜಿ ಯೋಜನೆಯಲ್ಲಿ ಅಂದಾಜು 90 ಲಕ್ಷ ರೂ. ಕಾಮಗಾರಿಗಳನ್ನು ಇಟ್ಟುಕೊಳ್ಳಲಾಗಿದೆ. ಅದರಲ್ಲಿ ಕೂಲಿಕಾರರು ಸರಿಯಾಗಿ ಕೆಲಸ ಮಾಡಿ ಕೆರೆ ಅಭಿವೃದ್ಧಿ ಮಾಡಿದರೆ ತಾಲೂಕಿಗೆ ಮಾದರಿ ಕೆರೆಯಾಗಬೇಕು ಎಂದು ಹೇಳಿದರು.

ವಿಭಿನ್ನ ಐಇಸಿ ಚಟುವಟಿಕೆ, ನಿಡಗುಂದಿ ಗ್ರಾಮದ ಹೊಸ ಕೆರೆಯಲ್ಲಿ ಕೂಲಿಕಾರರಿಗೆ “ವಿಬಿ ಜಿ ರಾಮ್ ಜಿ” ಎಂದು ಅಕ್ಷರ ಬರೆದು ಆಕರ್ಷಣೆ ಮಾಡಿ ಕೂಲಿಕಾರರ ಗಮನ ಸೆಳೆಯುವಂತೆ ಮಾಡಲಾಯಿತು. ಜೊತೆಗೆ ಅಕ್ಷರದಲ್ಲಿ ಕೂಲಿಕಾರರ ಮಹಿಳೆಯನ್ನು ಕುಳಿಸಿ ಸುತ್ತಲೂ ಜನರನ್ನು ನಿಲ್ಲಿಸಿ ಯೋಜನೆಯ ಬಗ್ಗೆ ಅರಿವು ಮೂಡಿಸಲಾಯಿತು.

ಜಾಬ್ ಕಾರ್ಡ್ ಮೇಳ ಅಭಿಯಾನ, ಸರ್ಕಾರದ ಮತ್ತು ಜಿಲ್ಲಾ ಪಂಚಾಯತ್ ಗದಗ ನಿರ್ದೇಶನದಂತೆ ತಾಲೂಕಿನಾದ್ಯಂತ ಜಾಬ್ ಕಾರ್ಡ್ ಮೇಳ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದಲ್ಲಿ ಹೊಸ ಜಾಬ್ ಕಾರ್ಡ್ ಮಾಡಿಸುವುದು, ತಿದ್ದುಪಡಿ, ಇಕೆವೈಸಿ ನವೀಕರಣ ಮಾಡಲಾಗುತ್ತದೆ ಎಂದು ತಿಳಿಸಿದರು.

ಮತದಾರರ ಪಟ್ಟಿ ಪರಿಷ್ಕರಣೆ-2026: ಮತದಾರರ ಪಟ್ಟಿಯಲ್ಲಿ ತಿದ್ದುಪಡಿ, ಹೊಸ ಸೇರ್ಪಡೆ ಮಾಡಿಸಿಕೊಳ್ಳಲು ಅವಕಾಶ ನೀಡಲಾಗಿದೆ. 18 ವರ್ಷ ಮೇಲ್ಪಟ್ಟ ಯುವಕ/ಯುವತಿಯರು ಮತದಾರರ ಪಟ್ಟಿ ಹೆಸರನ್ನು ಸೇರಿಸಲು ಅವಕಾಶ ನೀಡಲಾಗಿದೆ. ಈಗಾಗಲೇ ಮತದಾರರ ಪಟ್ಟಿಯಲ್ಲಿ ಇದ್ದು, ಅದರಲ್ಲಿ ತಿದ್ದುಪಡಿ ಇದ್ದರೆ ನಿಮ್ಮ ಗ್ರಾಮ ಬಿಎಲ್ಒ ಭೇಟಿ ಮಾಡಿ ತಿದ್ದುಪಡಿ ಮಾಡಿಸಬೇಕು. ಮತದಾರರ ಪಟ್ಟಿಯಿಂದ ಕೈಬಿಟ್ಟಿರುವವರು ಇದ್ದರೆ ಸೇರ್ಪಡೆಗೆ ಅವಕಾಶ ನೀಡಲಾಗಿದೆ ಸೇರ್ಪಡೆ ಮಾಡಿಸಿಕೊಳ್ಳಬೇಕು ಎಂದು ತಾ.ಪಂ. ಇಒ ಚಂದ್ರಶೇಖರ ಬಿ ಕಂದಕೂರ ಹೇಳಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಅಮರೇಶ ಮೂಲಿಮನಿ, ಜಿಲ್ಲಾ ಐಇಸಿ ಸಂಯೋಜಕರಾದ ವಿ.ಎಸ್. ಸಜ್ಜನ್, ತಾಂತ್ರಿಕ ಸಹಾಯಕ ಅಜಯ್ ಹೂಗಾರ, ಬಿಲ್ ಕಲೆಕ್ಟರ್ ಮತ್ತಪ್ಪ, ಜಿಕೆಎಂ ಅನಿತಾ ಸಂಗನಾಳ, ಪಂಚಾಯತ್ ಸಿಬ್ಬಂದಿಗಳ, ಕಾಯಕ ಬಂಧುಗಳು, ಕೂಲಿಕಾರರು ಇದ್ದರು.

---------------

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande