ಭಾರತೀಯ ರೆಡ್ ಕ್ರಾಸ್ ಸಂಸ್ಥೆ: ಆಜೀವ ಸದಸ್ಯತ್ವಕ್ಕೆ ಆಹ್ವಾನ
ಬಳ್ಳಾರಿ, 03 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಮಾನವೀಯ ಸೇವೆ ಮತ್ತು ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರ ರಕ್ಷಣೆಗೆ ಸದಾ ಮುಂಚೂಣಿಯಲ್ಲಿರುವ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಬಳ್ಳಾರಿ ಜಿಲ್ಲಾ ಶಾಖೆಯಲ್ಲಿ ಆಜೀವ ಸದಸ್ಯತ್ವ ಪಡೆಯಲು ಆಸಕ್ತ ಸಾರ್ವಜನಿಕರು, ಯುವಕರು ಹಾಗೂ ವಿದ್ಯಾರ್ಥಿಗಳಿಂದ ಅರ್ಜಿ ಆಹ
ಭಾರತೀಯ ರೆಡ್ ಕ್ರಾಸ್ ಸಂಸ್ಥೆ: ಆಜೀವ ಸದಸ್ಯತ್ವಕ್ಕೆ ಆಹ್ವಾನ


ಬಳ್ಳಾರಿ, 03 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಮಾನವೀಯ ಸೇವೆ ಮತ್ತು ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರ ರಕ್ಷಣೆಗೆ ಸದಾ ಮುಂಚೂಣಿಯಲ್ಲಿರುವ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಬಳ್ಳಾರಿ ಜಿಲ್ಲಾ ಶಾಖೆಯಲ್ಲಿ ಆಜೀವ ಸದಸ್ಯತ್ವ ಪಡೆಯಲು ಆಸಕ್ತ ಸಾರ್ವಜನಿಕರು, ಯುವಕರು ಹಾಗೂ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸುಮಾರು 1920ರಲ್ಲಿ ಸ್ಥಾಪನೆಗೊಂಡ ಅಂತಾರಾಷ್ಟಿಯ ಸಂಸ್ಥೆಯಾಗಿರುವ ರೆಡ್ ಕ್ರಾಸ್, ದೇಶದಲ್ಲಿ ಸಾರ್ವಜನಿಕರ ಜೀವ ಮತ್ತು ಆಸ್ತಿ ರಕ್ಷಿಸುವುದು ಹಾಗೂ ಸಮಾಜದ ಸಂಕಷ್ಟದಲ್ಲಿರುವವರಿಗೆ ನೆರವು ನೀಡುವುದನ್ನು ಮೂಲ ಉದ್ದೇಶವನ್ನಾಗಿ ಹೊಂದಿದೆ. ಈ ನಿಟ್ಟಿನಲ್ಲಿ ಸಂಸ್ಥೆಯ ಸಮಾಜಮುಖಿ ಕಾರ್ಯಗಳನ್ನು ವಿಸ್ತರಿಸಲು ಮತ್ತು ಸಾರ್ವಜನಿಕರ ಸಹಭಾಗಿತ್ವ ಹೆಚ್ಚಿಸಲು ಈ ಅವಕಾಶ ಕಲ್ಪಿಸಲಾಗಿದೆ.

ಬಳ್ಳಾರಿ ನಗರ ಹಾಗೂ ಸುತ್ತಮುತ್ತಲಿನ 18 ವರ್ಷ ಮೇಲ್ಪಟ್ಟ ಮಹಿಳೆಯರು ಮತ್ತು ಪುರುಷರು, ಆಸಕ್ತಿಯುಳ್ಳ ವಿದ್ಯಾರ್ಥಿಗಳು ಹಾಗೂ ಯುವಕರು ಸ್ವಯಂಸೇವಕರಾಗಿ ಸಂಸ್ಥೆಯೊ0ದಿಗೆ ಕೈಜೋಡಿಸಿ ಆಜೀವ ಸದಸ್ಯತ್ವ ಪಡೆಯಬಹುದಾಗಿದೆ. ಆಸಕ್ತರು ಬಳ್ಳಾರಿಯ ಹಳೆಯ ಕೋರ್ಟ್ ರಸ್ತೆಯಲ್ಲಿರುವ ಮಯೂರ ಹೋಟೆಲ್ ಹಿಂಭಾಗದ ‘ಭಾರತೀಯ ರೆಡ್ ಕ್ರಾಸ್ ಸಂಸ್ಥೆ’ಯ ಕಚೇರಿಗೆ ಖುದ್ದಾಗಿ ಭೇಟಿ ನೀಡಿ ನಿಗದಿತ ಅರ್ಜಿಯನ್ನು ಪಡೆದುಕೊಂಡು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ವಿವರ ಹಾಗೂ ಮಾಹಿತಿಗಾಗಿ ಮೊ.9886173411, 7411933918 ಸಂಪರ್ಕಿಸಬಹುದೆ0ದು ಸಂಸ್ಥೆಯ ಜಿಲ್ಲಾ ಕಾರ್ಯದರ್ಶಿ ಎಂ.ಎ. ಶಕೀಬ್ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande