ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ
ಬಳ್ಳಾರಿ, 03 ಸೆಪ್ಟೆಂಬರ್ (ಹಿ.ಸ.) ಆ್ಯಂಕರ್ : ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ 2026-27ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಾಲ ಹಾಗೂ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ
ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ


ಬಳ್ಳಾರಿ, 03 ಸೆಪ್ಟೆಂಬರ್ (ಹಿ.ಸ.)

ಆ್ಯಂಕರ್ : ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ 2026-27ನೇ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಸಾಲ ಹಾಗೂ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿದ್ದು, ‘ಅರಿವು’ ಶೈಕ್ಷಣಿಕ ಸಾಲ ಯೋಜನೆಗೆ ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಟಿ. ಹೊನ್ನೂರಪ್ಪ ಅವರು ತಿಳಿಸಿದ್ದಾರೆ.

*ಯೋಜನೆಗಳು:*

ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ (ನೂತನ ಮತ್ತು ನವೀಕರಣ): ವಯೋಮಿತಿ 18 ರಿಂದ 30 ವರ್ಷಗಳಾಗಿದ್ದು, ವಾರ್ಷಿಕ ವರಮಾನ ರೂ.3.50 ಲಕ್ಷ ಮಿತಿಯೊಳಗಿರಬೇಕು.

ವಿದೇಶಿ ವ್ಯಾಸಂಗ ಯೋಜನೆ: ಕುಟುಂಬದ ವಾರ್ಷಿಕ ಆದಾಯ ರೂ.8 ಲಕ್ಷಗಳ ಮಿತಿಯೊಳಗಿರಬೇಕು. ಗಂಗಾ ಕಲ್ಯಾಣ ನೀರಾವರಿ ಯೋಜನೆ: ಅಭ್ಯರ್ಥಿಯು ಕನಿಷ್ಠ 2 ಎಕರೆ ಜಮೀನು ಹೊಂದಿರಬೇಕು. ಸ್ವಾವಲಂಬಿ ಸಾರಥಿ ಯೋಜನೆ (ಟ್ರಾಕ್ಟರ್ / ಟ್ಯಾಕ್ಸಿ): ವಯೋಮಿತಿ 21 ರಿಂದ 45 ವರ್ಷಗಳು. ಹೊಲಿಗೆ ಯಂತ್ರ / ಜಿಗ್-ಜಾಗ್ ಯೋಜನೆ.

*ಅರ್ಹತೆ ಮತ್ತು ಷರತ್ತುಗಳು:*

ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು ಹಾಗೂ ಕಾಡುಗೊಲ್ಲ ಜಾತಿಗೆ ಸೇರಿದವರಾಗಿರಬೇಕು. ಅರ್ಜಿದಾರರ ವಯಸ್ಸು 18 ರಿಂದ 55 ವರ್ಷದ ಮಿತಿಯೊಳಗಿರಬೇಕು (ನಿರ್ದಿಷ್ಟ ಯೋಜನೆಗಳಿಗೆ ನಿಗದಿಪಡಿಸಿದ ವಯೋಮಿತಿ ಅನ್ವಯಿಸುತ್ತದೆ).

ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣಪತ್ರ ಕಡ್ಡಾಯ. ಕುಟುಂಬದ ವಾರ್ಷಿಕ ಆದಾಯ ಗ್ರಾಮೀಣ ಪ್ರದೇಶದವರಿಗೆ ರೂ.98,000 ಹಾಗೂ ನಗರ ಪ್ರದೇಶದವರಿಗೆ ರೂ.1,20,000 ಮಿತಿಯೊಳಗಿರಬೇಕು.

ಅರ್ಜಿದಾರರು ಈ ಹಿಂದೆ ನಿಗಮದಿಂದ ಅಥವಾ ಸರ್ಕಾರದ ಯಾವುದೇ ಯೋಜನೆಗಳಡಿ ಸೌಲಭ್ಯ ಪಡೆದಿರಬಾರದು. ಒಂದು ಕುಟುಂಬಕ್ಕೆ ಒಬ್ಬರಿಗೆ ಮಾತ್ರ ಅವಕಾಶ. 2024-25 ಹಾಗೂ 2025-26ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಆಯ್ಕೆ ಪ್ರಕ್ರಿಯೆಯಲ್ಲಿ ಮಹಿಳೆಯರಿಗೆ ಶೇ. 33, ವಿಕಲಚೇತನರಿಗೆ ಶೇ. 5 ಹಾಗೂ ತೃತೀಯ ಲಿಂಗಿಗಳಿಗೆ ಶೇ. 1 ರಷ್ಟು ಮೀಸಲಾತಿ ಇರುತ್ತದೆ.

ಅರ್ಹ ಅಭ್ಯರ್ಥಿಗಳು ತಮ್ಮ ಆಧಾರ್ ಸಂಖ್ಯೆಗೆ ಮೊಬೈಲ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯನ್ನು ಕಡ್ಡಾಯವಾಗಿ ಜೋಡಣೆ ಮಾಡಿರಬೇಕು. ಆಧಾರ್ ಕಾರ್ಡ್ನಲ್ಲಿರುವಂತೆಯೇ ಹೆಸರು, ವಿಳಾಸ, ಜಾತಿ/ಆದಾಯ ಪ್ರಮಾಣಪತ್ರ ಮತ್ತು ಬ್ಯಾಂಕ್ ಪಾಸ್ಬುಕ್ ವಿವರಗಳು ತಾಳೆಯಾಗಬೇಕು.

ಅಭ್ಯರ್ಥಿಗಳು ಬೆಂಗಳೂರು-ಒನ್, ಕರ್ನಾಟಕ-ಒನ್, ಅಟಲ್-ಜೀ ಜನಸ್ನೇಹಿ ಕೇಂದ್ರ ಅಥವಾ ನಾಗರಿಕ ಸೇವಾ ಕೇಂದ್ರಗಳ ಮೂಲಕ ‘ಸೇವಾ ಸಿಂಧು’ ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ನಿಗಮದ ಬಳ್ಳಾರಿ ಜಿಲ್ಲಾ ಕಚೇರಿಯ ದೂರವಾಣಿ ಸಂಖ್ಯೆ 08392-267038 ಅನ್ನು ಸಂಪರ್ಕಿಸಬಹುದು.

----

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande