
ತೋರಣಗಲ್ಲು, 03 ಸೆಪ್ಟೆಂಬರ್ (ಹಿ.ಸ.)
ಆ್ಯಂಕರ್ : ತೋರಣಗಲ್ಲು ಗ್ರಾಮದ ನಿವಾಸಿಯಾದ ಶೆಕ್ ಮಾಬುಸಾಬ್ ಎಂಬ 56 ಆ.25 ರಂದು ಮನೆಯಿಂದ ನಾಪತ್ತೆಯಾಗಿರುವ ಕುರಿತು ತೋರಣಗಲ್ಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ಚಹರೆ ಗುರುತು:
ಎತ್ತರ 5.8 ಅಡಿ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದಾನೆ. ಮನೆಯಿಂದ ಹೊರಡುವಾಗ ಬಿಳಿ ಬಣ್ಣದ ಶರ್ಟ್ ಹಾಗೂ ನೀಲಿ ಮತ್ತು ಬಿಳಿ ಚೌಕವುಳ್ಳ ಬಣ್ಣದ ಲುಂಗಿ ಧರಿಸಿರುತ್ತಾನೆ. ಕನ್ನಡ, ಹಿಂದಿ, ತೆಲುಗು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾನೆ.
ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಅಥವಾ ಸುಳಿವು ಲಭ್ಯ ಆದಲ್ಲಿ ತೋರಣಗಲ್ಲು ಪೊಲೀಸ್ ಠಾಣೆಯ ದೂ.08395-250100, ಮೊ.9480803062, ಅಥವಾ ಪೊಲೀಸ್ ಕಂಟ್ರೋಲ್ ರೂಂ ದೂ.08392-258100 ಗೆ ಸಂಪರ್ಕಿಸಬಹುದಾಗಿದೆ ಎಂದು ಕೋರಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್